

ಚೆನ್ನೈ: ಭಾರತೀಯ ನೌಕಾಪಡೆಯ ಡೈರೆಕ್ಟರ್ ಜನರಲ್ ರಾಕೇಶ್ ಪಾಲ್ ಅವರು ಹೃದಯಾಘಾತದಿಂದ ಇಂದು ಚೆನ್ನೈನಲ್ಲಿ ವಿಧಿವಶರಾಗಿದ್ದಾರೆ.
ಇಂದು ಮಧ್ಯಾಹ್ನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಭೇಟಿ ಹಿನ್ನಲೆಯಲ್ಲಿ ಐಎನ್ಎಸ್ ಅಡ್ಯಾರ್ ನೌಕೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾಗ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಕೂಡಲೇ ಚೆನ್ನೈನ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ (ಆರ್ಜಿಜಿಹೆಚ್) ದಾಖಲಿಸಲಾಗಿತ್ತು. ಆದರೆ ವೈದ್ಯರ ಸತತ ಪ್ರಯತ್ನದ ಬಳಿಕವೂ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಸಂಜೆ 7 ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹಾಗೂ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.