ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ (ಆಯಿಷ್) ನಿರ್ದೇಶಕಿ ವಿರುದ್ಧ ಕಾರ್ಯನಿರ್ವಾಹಕ ಮಂಡಳಿ ಸದಸ್ಯರಿಂದ ಸಚಿವ ಜೆ.ಪಿ. ನಡ್ಡಾ ಅವರಿಗೆ ದೂರು

ಮೈಸೂರು: ನಗರದ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ (ಆಯಿಷ್) ನಿರ್ದೇಶಕಿ ಡಾ.ಎಂ.ಪುಷ್ಪಾವತಿ ಅವರು ಅನುಮಾನಾಸ್ಪದ ಕಾರ್ಯನಿರ್ವಹಣೆ, ಸ್ವಜನ ಪಕ್ಷಪಾತ ಮಾಡುತ್ತಿದ್ದು, ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಸಂಸ್ಥೆಯ ಕಾರ್ಯನಿರ್ವಾಹಕ ಮಂಡಳಿ ಸದಸ್ಯರು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಆಯಿಷ್ ಮೇಲೆ ಸಿಬಿಐ ದಾಳಿ ನಡೆದಿರುವುದರಿಂದ ಕೂಡಲೇ ಪುಷ್ಪಾವತಿ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಾಯ ಮಾಡಲಾಗಿದೆ. ಆಯಿಷ್ ಸಂಸ್ಥೆಯಲ್ಲಿ ನಡೆದಿರುವ ಕಾಮಗಾರಿ, ತಾಂತ್ರಿಕ ಚಟುವಟಿಕೆಗಳಲ್ಲಿ ವ್ಯತ್ಯಾಸಗಳು ಆಗಿರುವ ದೂರು ಇವೆ. ಈ ಹಿನ್ನೆಲೆಯಲ್ಲಿ 2024ರ ಮಾರ್ಚ್ 25 ಮತ್ತು 26ರಂದು ಸಿಬಿಐ ದಾಳಿ ನಡೆದಿದೆ. ಆದರೆ ಸಂಸ್ಥೆ ನಿರ್ದೇಶಕರು ಇದು ಸಿಬಿಐನ ಸಾಮಾನ್ಯ ಭೇಟಿ ಹಾಗೂ ಪರಿಶೀಲನೆ ಎಂಬಂತೆ ಉತ್ತರ ನೀಡಿದ್ದಾರೆಂದು ಆಯಿಷ್ ಕಾರ್ಯನಿರ್ವಾಹಕ ಮಂಡಳಿ ಸದಸ್ಯರಾದ ಟಿ.ಗಿರೀಶ್ ಪ್ರಸಾದ್, ಡಾ.ಜಿ.ಆರ್.ಚಂದ್ರಶೇಖರ್, ಡಾ.ಎ.ಆರ್.ಬಾಬು ಪತ್ರದಲ್ಲಿ ದೂರಿದ್ದಾರೆ.
ತಪ್ಪು ಮಾಹಿತಿ:
ಸಿಐಬಿ ಸುಖಾ ಸುಮ್ಮನೇ ದಾಳಿ ಮಾಡುವುದಿಲ್ಲ. ಜವಾಬ್ದಾರಿಯುತ ವ್ಯಕ್ತಿಗಳು ಸಂಸ್ಥೆಯಲ್ಲಿ ನಡೆದಿರುವ ಅವ್ಯವಹಾರ, ದುರುಪಯೋಗಕ್ಕೆ ಸಂಬಂಧಿಸಿ ನೀಡುವ ನಿಗದಿತ ದೂರು ಆಧರಿಸಿ ದಾಳಿ ಮಾಡಲಾಗುತ್ತದೆ. ಆಯಿಷ್ ನಿರ್ದೇಶಕಿ ಹಾಗೂ ಕೆಲವು ಅವರ ಪರವಾಗಿರುವ ವಿಭಾಗಗಳ ಮುಖ್ಯಸ್ಥರು ಸಿಬಿಐ ದಾಳಿ ವಿಚಾರವಾಗಿ ವಿಶೇಷ ಲೆಕ್ಕ ಪರಿಶೋಧನೆ ಎನ್ನುವ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ಮಂಡಳಿ ಸದಸ್ಯರು ದೂರಿದ್ದಾರೆ.
ಡಾ.ಪುಷ್ಪಾವತಿ ಆಯಿಷ್‌ನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಚಟುವಟಿಕೆ, ಯೋಜನೆಗಳು, ಕಾರ್ಯಕ್ರಮಗಳ ಕುರಿತು ಕಾರ್ಯ ನಿರ್ವಾಹಕ ಸದಸ್ಯರಾದ ನಮಗೆ ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ನಿರ್ದೇಶಕರ ಯಾವುದೇ ಚಟುವಟಿಕೆಗಳು ಪಾರದರ್ಶಕವಾಗಿಲ್ಲ. ಅವರ ಹಲವು ಚಟುವಟಿಕೆ ಅನುಮಾನದಿಂದ ಕೂಡಿವೆ. ಬಹಳಷ್ಟು ವಿಚಾರದಲ್ಲಿ ಅವರು ಸ್ವಜನಪಕ್ಷಪಾತ, ತಾರತಮ್ಯ ಅನುಸರಿಸುತ್ತಿದ್ದಾರೆ. ಸಿಬ್ಬಂದಿ ನೇಮಕ, ಖರೀದಿ ಹಾಗೂ ಹಣಕಾಸು ವಿಚಾರದಲ್ಲಿ ಶಿಸ್ತು ಪಾಲಿಸಿಲ್ಲ. ಈ ಕಾರಣದಿಂದಲೇ ಸಿಬಿಐ ದಾಳಿ ನಡೆದಿದ್ದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಖರೀದಿ ವಿಷಯದಲ್ಲೂ ಅನುಮಾನ:
ಆಯಿಷ್‌ನ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ನಡೆದಿರುವ ಕೋಟಿಗಟ್ಟಲೇ ಕಾಮಗಾರಿಗಳು (ಖರೀದಿ ವಿಭಾಗ) ನಡೆದಿದ್ದರೂ ಇದಕ್ಕೆ ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆದಿರುವ ಬಗ್ಗೆಯೂ ನಮಗೆ ಅನುಮಾನಗಳಿವೆ. ಹಲವು ಸಾಫ್ಟ್‌ವೇರ್, ಎಲೆಕ್ಟ್ರಾನಿಕ್ಸ್ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಯಲ್ಲೂ ಸಾಕಷ್ಟು ಅನುಮಾನಗಳಿವೆ. ನಿರ್ದೇಶಕಿ ಡಾ.ಪುಷ್ಪಾವತಿ ಅವರ ಏಕಪಕ್ಷೀಯ ಅನುಮತಿಯಿಂದಲೇ ಇವೆಲ್ಲವೂ ಆಗಿರುವ ಕುರಿತು ತನಿಖೆಯಾಗಬೇಕಿದೆ ಎಂದು ಹೇಳಿದ್ದಾರೆ.
ಸಿಬಿಐ ದಾಳಿ, ಕೋಟ್ಯಂತರ ರೂ. ಖರ್ಚಿನ ವಿಚಾರವಾಗಿ ಇರುವ ಅನುಮಾನಗಳ ಹಿನ್ನೆಲೆಯಲ್ಲಿ ಡಾ.ಪುಷ್ಪಾವತಿ ಅವರನ್ನು ಕೂಡಲೇ ಆಯಿಷ್ ನಿರ್ದೇಶಕರ ಹುದ್ದೆಯಿಂದ ವರ್ಗಾವಣೆ ಮಾಡಿ, ತನಿಖೆ ಮುಗಿಯುವರೆಗೂ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಬೇಕು ಎಂದು ಸಂಸ್ಥೆಯ ಕಾರ್ಯನಿರ್ವಾಹಕ ಮಂಡಳಿ ಸದಸ್ಯರು ಒತ್ತಾಯಿಸಿದ್ದಾರೆ.

Share This Article

ನೈಲ್ ಪಾಲಿಶ್ ಬಳಸಿದ್ರೆ ಬರುತ್ತೆ ಕ್ಯಾನ್ಸರ್! ಯುವತಿಯರೇ ಎಚ್ಚರ

 ಬೆಂಗಳೂರು:  ಮಹಿಳೆಯರು ತಮ್ಮ ಕೈ ಮತ್ತು ಪಾದದ ಉಗುರುಗಳಿಗೆ ನೈಲ್ ಪಾಲಿಶ್ ಹಚ್ಚಲು ಇಷ್ಟಪಡುತ್ತಾರೆ.  ವಿಶೇಷ…

ಎಚ್ಚರ, ದೇಹ ದಣಿದಿದ್ರೂ ನಿದ್ದೆ ಬರ್ತಿಲ್ಲವೇ? ಸಿರ್ಕಾಡಿಯನ್ ಸಿಂಡ್ರೋಮ್​ ಇರಬಹುದು!!

ಬೆಂಗಳೂರು: ದೇಹ ದಣಿದಿರುತ್ತದೆ. ಆದರೆ ನಿದ್ರೆ ಬರುತ್ತಿಲ್ಲ. ಇದಕ್ಕೆ ದೇಹದ ಸಿರ್ಕಾಡಿಯನ್ ಲಯ ತಪ್ಪಿರುವುದು, ಅತಿಯಾದ…

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…