More

    ಜು.19ರಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ಸೇವಾವಧಿ ಮುಕ್ತಾಯ


    ಬೆಂಗಳೂರು: ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ಸೇವಾವಧಿ ಜು.19ರಂದು ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಡಾ.ಮಂಜುನಾಥ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದಾರೆ.

    2007 ರಿಂದ ಅಂದರೆ ಸತತ 16 ವರ್ಷಗಳಿಂದಲೂ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರಾಗಿರುವ ಮಂಜುನಾಥ್, ಇದೀಗ ಸೇವಾವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಸಿಎಂ ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ. ಕಳೆದ ವರ್ಷವೇ ಸೇವಾವಧಿ ಮುಕ್ತಾಯವಾಗಿತ್ತು. ಆದರೆ ರೋಗಿಗಳು, ಜನರ ಒತ್ತಾಯದ ಮೇರೆಗೆ ಕಳೆದ ಬಾರಿಯ ಸರ್ಕಾರ ಒಂದು ವರ್ಷಗಳ ಸೇವೆ ಮುಂದುವರಿಸಿತ್ತು. ಇದೀಗ ಸೋಮವಾರಕ್ಕೆ ಸೇವಾವಧಿ ಮುಕ್ತಾಯ ಹಿನ್ನೆಲೆಯಲ್ಲಿ ಸಿಎಂ ಭೇಟಿ ಮಾಡಿ ಮಂಜುನಾಥ್ ಅವರು ಚರ್ಚೆ ನಡೆಸಲಿದ್ದಾರೆ.

    ಇದನ್ನೂ ಓದಿ: Chandrayaan-3: ಬಾಹ್ಯಾಕಾಶ ನೌಕೆಯ ಪ್ರಮುಖ ಬಿಡಿಭಾಗಗಳು ತಯಾರಾಗಿದ್ದು ಕುಂದಾನಗರಿ ಬೆಳಗಾವಿಯಲ್ಲಿ

    ಸಿಬ್ಬಂದಿ ಮನವಿ
    ಕಳೆದ ವರ್ಷವೂ ಮಂಜುನಾಥ್ ಅವರು ನಿವೃತ್ತಿಯಾಗುತ್ತಿರುವ ಸುದ್ದಿ ಕೇಳುತ್ತಿದ್ದಂತೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಿಬ್ಬಂದಿ ವರ್ಗವು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ಮಂಜುನಾಥ್ ಅವರನ್ನೇ ನಿರ್ದೇಶಕರನ್ನಾಗಿ ಮುಂದುವರಿಸುವಂತೆ ಮನವಿ ಮಾಡಿದ್ದರು. ನ್ಯಾಷನಲ್ ಮೆಡಿಕಲ್ ಕೌನ್ಸಿಲ್ ಪ್ರಕಾರ 70 ವರ್ಷದವರೆಗೆ ಸೇವೆ ಸಲ್ಲಿಸಲು ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದರು.

    ಇದನ್ನೂ ಓದಿ: KAR TET Exam 2023: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

    ಡಾ.ಸಿ.ಎನ್.ಮಂಜುನಾಥ್ ಸಾಧನೆ
    ಡಾ.ಸಿ.ಎನ್.ಮಂಜುನಾಥ್ ಅವರು ನಿರ್ದೇಶಕರಾಗಿ ಅಧಿಕಾರವಹಿಸಿಕೊಂಡಾಗಿನಿಂದ ಇಲ್ಲಿಯವರೆಗೂ ಜಯದೇವ ಆಸ್ಪತ್ರೆಯಲ್ಲಿ 50 ಲಕ್ಷಕ್ಕೂ ಹೆಚ್ಚು ಹೃದ್ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. 6 ಲಕ್ಷಕ್ಕೂ ಹೆಚ್ಚು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಚಿಕಿತ್ಸೆ ನಡೆದಿದೆ. ವೈಯಕ್ತಿಕವಾಗಿ ಡಾ.ಸಿ.ಎನ್.ಮಂಜುನಾಥ್ ಅವರು 54 ಸಾವಿರಕ್ಕೂ ಅಧಿಕ ಹಾರ್ಟ್ ಆಪರೇಷನ್ ಮಾಡಿದ್ದಾರೆ. ವೈದ್ಯಕೀಯ ರಂಗದಲ್ಲಿ ಡಾ.ಮಂಜುನಾಥ್ ಸಲ್ಲಿಸಿರುವ ಸೇವೆಗೆ ಭಾರತ ಸರ್ಕಾರದ ಪ್ರತಿಷ್ಟಿತ ಪದ್ಮಶ್ರೀ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸರ್ ಸಿ.ವಿ.ರಾಮನ್ ಯುವ ವಿಜ್ಞಾನಿ ಪ್ರಶಸ್ತಿ, ವಿಶ್ವಮಾನವ ಪ್ರಶಸ್ತಿ, ಸರ್.ಎಂ.ವಿಶ್ವೇಶ್ವರಯ್ಯ ಪ್ರಶಸ್ತಿ, ದಿ ಗ್ರೇಟ್ ಮ್ಯಾನ್ ಆಫ್ ಕರ್ನಾಟಕ ಪ್ರಶಸ್ತಿ ಲಭಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts