More

    ಆಸ್ಕರ್ ಜ್ಯೂರಿಯಾಗಿ ಪಾಲ್ಗೊಂಡ ಪವನ್ ಒಡೆಯರ್; ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರಾಗಿ ಭಾಗಿ

    ಬೆಂಗಳೂರು: ನಿರ್ದೇಶಕ ಪವನ್ ಒಡೆಯರ್​ ಅವರ ಚೊಚ್ಚಲ ನಿರ್ಮಾಣದ ‘ಡೊಳ್ಳು’ ಸಿನಿಮಾ ಎರಡು ರಾಷ್ಟ್ರಪ್ರಶಸ್ತಿಗಳನ್ನು ಪಡೆದ ಬೆನ್ನಿಗೇ ಅವರು ಇನ್ನೊಂದು ದೊಡ್ಡ ಮನ್ನಣೆಗೆ ಪಾತ್ರವಾಗಿದ್ದಾರೆ. ಅದೇನೆಂದರೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿ ಪಾಲ್ಗೊಳ್ಳುವ ಮೂಲಕ ಅವಾರ್ಡ್​ ಜ್ಯೂರಿ ಪೈಕಿ ಅವರೂ ಒಬ್ಬರೆನಿಸಿಕೊಂಡಿದ್ದಾರೆ.

    ಭಾರತದಿಂದ ಬೇರೆ ಬೇರೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗೆ ಹಲವಾರು ಸಿನಿಮಾಗಳು ನಾಮನಿರ್ದೇಶನವಾಗಿ ಗಮನ ಸೆಳೆಯುತ್ತಿವೆ. ವಿಶೇಷವೆಂದರೆ ಕನ್ನಡದ ಪ್ರತಿಭಾವಂತ ನಿರ್ದೇಶಕ ಹಾಗೂ ನಿರ್ಮಾಪಕ ಪವನ್ ಒಡೆಯರ್ ಆಸ್ಕರ್ ಅವಾರ್ಡ್ ಸೆಲೆಕ್ಷನ್ ಕಮಿಟಿ ಸದಸ್ಯರಾಗಿ ಭಾಗಿಯಾಗಿದ್ದಾರೆ. ಈ ಖುಷಿಯ ಕ್ಷಣವನ್ನು ಅವರು ಹಂಚಿಕೊಂಡಿದ್ದಾರೆ.

    ಆಸ್ಕರ್ ಕಮಿಟಿಯಿಂದ ನನಗೆ ಕರೆ ಬರುತ್ತದೆಂದು ನಿರೀಕ್ಷೆ ಕೂಡ ಮಾಡಿರಲಿಲ್ಲ. ಆರಂಭದಲ್ಲಿ ನನಗೆ ನಂಬಲೂ ಸಾಧ್ಯವಾಗಲಿಲ್ಲ. ನನ್ನ ಸಿನಿಮಾ ಕೆಲಸಗಳನ್ನು ಗುರುತಿಸಿ ಜ್ಯೂರಿಯಾಗಿ ಭಾಗವಹಿಸಲು ಆಹ್ವಾನ ನೀಡಿದ್ದು ಬಹಳ ಸಾರ್ಥಕತೆ ನೀಡಿದೆ. ನನ್ನ ನಿರ್ಮಾಣದ ‘ಡೊಳ್ಳು’ ಸಿನಿಮಾ ಇಂಥದ್ದೊಂದು ಪ್ರತಿಷ್ಠಿತ ವೇದಿಕೆಯನ್ನು ನನಗೆ ಕಲ್ಪಿಸಿಕೊಟ್ಟಿದೆ. ಇದು ಬಹಳ ದೊಡ್ಡ ಗೌರವ ಎಂದೇ ನಾನು ಭಾವಿಸುತ್ತೇನೆ. 17 ಜನರ ತಂಡದಲ್ಲಿ ಕನ್ನಡ ಚಿತ್ರರಂಗದಿಂದ ನಾನೂ ಒಬ್ಬ ಜ್ಯೂರಿಯಾಗಿ ಭಾಗವಹಿಸಿದ್ದು ಬಹಳ ಸಂತಸ ತಂದಿದೆ ಎಂದು ಪವನ್ ಒಡೆಯರ್ ಹರ್ಷ ವ್ಯಕ್ತಪಡಿಸಿದ್ದಾರೆ.

    ಆಸ್ಕರ್ ಜ್ಯೂರಿಯಾಗಿ ಪಾಲ್ಗೊಂಡ ಪವನ್ ಒಡೆಯರ್; ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರಾಗಿ ಭಾಗಿ

    ಹಿಂದಿ, ಬೆಂಗಾಲಿ, ತೆಲುಗು, ತಮಿಳು, ಗುಜರಾತಿ, ಮಲಯಾಳಂ ಭಾಷೆಗಳಿಂದ ಸಿನಿಮಾಗಳು ಆಸ್ಕರ್​ಗೆ ಆಯ್ಕೆಯಾಗಿದ್ವು. ನಮ್ಮ ಭಾಷೆಯಿಂದ ಯಾವ ಸಿನಿಮಾ ಕೂಡ ಆಸ್ಕರ್​ಗೆ ಆಯ್ಕೆ ಆಗಿಲ್ಲದಿರುವುದು ಬೇಸರದ ಸಂಗತಿ. ಮುಂದಿನ ದಿನಗಳಲ್ಲಿ ಖಂಡಿತ ನಮ್ಮ ಸಿನಿಮಾಗಳು ಆಸ್ಕರ್​ಗೆ ನಾಮ ನಿರ್ದೇಶನವಾಗಲಿವೆ ಎಂಬ ಭರವಸೆಯನ್ನೂ ಅವರು ವ್ಯಕ್ತಪಡಿಸಿದ್ದಾರೆ. ಪವನ್ ಒಡೆಯರ್ ನಿರ್ದೇಶನದ ‘ರೇಮೋ’ ಸಿನಿಮಾ ಸದ್ಯದಲ್ಲೇ ಬಿಡುಗಡೆ ಆಗಲಿದೆ.

    ಶ್ರೀಧರ ಎಂಬ ಯುವಕ ಮೊಹ್ಮದ್ ಸಲ್ಮಾನ್ ಆದ ಕಥೆ-ವ್ಯಥೆ; ಬಲವಂತದ ಖತ್ನಾ, ಮತಾಂತರ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts