More

    ಸ್ವಯಂಸೇವಕರೇ, ಆಪತ್ಕಾಲದಲ್ಲಿ ನೆರವಾಗಿ

    ಶೃಂಗೇರಿ: ವಿಪತ್ತು ಯಾವಾಗ ಬೇಕಾದರೂ ಎದುರಾಗಬಹುದು. ಮಲೆನಾಡಿನಲ್ಲಿ ಅಕಾಲಿಕ ಮಳೆಯಿಂದ ಗದ್ದೆಗಳಿಗೆ ನೀರು ನುಗ್ಗಿ ಬೆಳೆ ಹಾಳಾಗುತ್ತಿದ್ದು, ಇಂಥ ಸಂದರ್ಭದಲ್ಲಿ ಸ್ವಯಂಸೇವಕರು ಸ್ವ ಇಚ್ಛೆಯಿಂದ ಕೆಲಸ ನಿರ್ವಹಿಸಬೇಕು ಎಂದು ಜನಜಾಗೃತಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ತಿಳಿಸಿದರು.

    ಜಿಎಸ್​ಬಿ ಸಭಾ ಭವನದಲ್ಲಿ ಶನಿವಾರ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕಗಳ ಸ್ವಯಂಸೇವಕರು ಹಾಗೂ ಸಂಯೋಜಕರಿಗೆ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ ಮೂಲಕ ಆಯೋಜಿಸಿದ್ದ ವಿಪತ್ತು ನಿರ್ವಹಣೆ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

    ಸೇವಾ ಭಾವನೆ, ಆತ್ಮಸ್ಥೆರ್ಯ, ತ್ಯಾಗದಿಂದ ಸ್ವಯಂಸೇವಕರು ಕಾರ್ಯ ನಿರ್ವಹಿಸಬೇಕು. ರಕ್ಷಣಾ ಕಾರ್ಯದಲ್ಲಿ ದುಡಿಯುವಾಗ ಬರುವ ಆಪತ್ತುಗಳನ್ನು ಎದುರಿಸಿ ತಮ್ಮನ್ನು ರಕ್ಷಿಸಿಕೊಳ್ಳಬೇಕು. ಇದಕ್ಕೆ ಎನ್​ಡಿಆರ್​ಎಫ್ ಸಿಬ್ಬಂದಿ ಮಾರ್ಗದರ್ಶನ ಹಾಗೂ ಅವರಿಂದ ತರಬೇತಿ ಪಡೆಯುವ ಅಗತ್ಯವಿದೆ ಎಂದರು.

    ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಮಾತನಾಡಿ, ಮಲೆನಾಡಿನಲ್ಲಿ ಅತಿವೃಷ್ಟಿ ಸಂದರ್ಭದಲ್ಲಿ ಎದುರಾಗುವ ಸಂಕಷ್ಟ ಪರಿಹಾರಕ್ಕಾಗಿ ಸ್ವಯಂ ಸೇವಕರ ಪಡೆ ಅಗತ್ಯವಿದೆ. ಪ್ರತಿ ಗ್ರಾಮಗಳಲ್ಲಿ ಇಂಥ ತಂಡಗಳ ಅಗತ್ಯವಿದೆ. ಸ್ವಯಂಸೇವಕರಿಗೆ ತರಬೇತಿ ನೀಡುವ ಮೂಲಕ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯಕ್ಕೆ ಉತ್ತಮ ಕೊಡುಗೆ ನೀಡುತ್ತಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts