‘ಯೆಲ್ಲೋ ಗ್ಯಾಂಗ್ಸ್’ ವಿಭಿನ್ನ ಸ್ಟುಡಿಯೊಸ್ ನಿರ್ಮಾಣದಲ್ಲಿ ರವೀಂದ್ರ ಪರಮೇಶ್ವರಪ್ಪ ಅವರ ರಚನೆ ಮತ್ತು ನಿರ್ದೇಶನವಿರುವ ಕ್ರೈಂ-ಥ್ರಿಲ್ಲರ್ ಕನ್ನಡ ಚಲನಚಿತ್ರಕ್ಕೆ ಇದೀಗ ಸ್ಟಾರ್ ನಿರ್ದೇಶಕರ ಮೆಚ್ಚುಗೆ ಸಿಕ್ಕಿದೆ. ಇತ್ತೀಚೆಗೆ ನಿರ್ದೇಶಕ ಯೋಗರಾಜ್ ಭಟ್ ಚಿತ್ರದ ಶೀರ್ಷಿಕೆಯನ್ನು ಬಿಡುಗಡೆ ಮಾಡಿ ತಂಡಕ್ಕೆ ಹಾರೈಸಿದ್ದಾರೆ.
ಇದನ್ನೂ ಓದಿ: ಅಪ್ಪ-ಅಮ್ಮನಾಗುತ್ತಿರುವ ವಿಷಯ ಹಂಚಿಕೊಂಡ ಮಾಜಿ ಕ್ರಿಕೆಟಿಗ, ನಟಿ
ಎರಡು ಹಂತಗಳಲ್ಲಿ ಒಟ್ಟು 35 ದಿನಗಳ ಕಾಲ ಸಂಪೂರ್ಣವಾಗಿ ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ತಾಂತ್ರಿಕ ವರ್ಗದ ಬಗ್ಗೆ ಹೇಳುವುದಾದರೆ, ಛಾಯಾಗ್ರಹಣವನ್ನು ಸುಜ್ಞಾನ್ ನಿರ್ವಹಿಸಿದ್ದಾರೆ. ಚಿತ್ರಕ್ಕೆ ರೋಹಿತ್ ಸೋವರ್ ಸಂಗೀತ, ಸುರೇಶ್ ಆರ್ಮುಗಂ ಸಂಕಲನ ಮತ್ತು ಪ್ರವೀಣ್ ಕುಮಾರ್ ಜಿ ಸಂಭಾಷಣೆ ಒದಗಿಸಿದ್ದಾರೆ. ಮನೋಜ್ ಪಿ, ಜಿ.ಎಂ.ಆರ್ ಕುಮಾರ್ (ಕೆವಿಜಿ) ಹಾಗೂ ಜೆ.ಎನ್.ವಿ, ಶಿವಮೊಗ್ಗ ಶಾಲೆಯ ಹಳೇ ವಿದ್ಯಾರ್ಥಿಗಳು ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ.
ಇದನ್ನೂ ಓದಿ: ಕಿಕ್ಕೇರಿದ ಸುದ್ದಿಗೆ ಸಿಡಿದೆದ್ದ ಬಾಲಿವುಡ್; ಚಾನೆಲ್-ಆ್ಯಂಕರ್ಸ್ ವಿರುದ್ಧ ಕೋರ್ಟ್ಗೆ ದೂರಿತ್ತ ‘ಖಾನ್ದಾನ್’
ಬಲರಾಜ್ವಾಡಿ, ನಾಟ್ಯರಂಗ, ನವೀನ್ ದೇವಯ್ಯ, ಅರ್ಚನಾ ಕೊಟ್ಟಿಗೆ, ಸತ್ಯ ಉಮ್ಮತ್ತಾಲ್, ಪ್ರದೀಪ್ ಪೂಜಾರಿ, ವಿನೀತ್ ಕಟ್ಟಿ, ಮಲ್ಲಿಕಾರ್ಜುನ ದೇವರಮನೆ, ನಂದ ಗೋಪಾಲ್, ರವಿ ಗಜ ಜಿಗಣಿ, ನೀನಾಸಂ ದಯಾನಂದ್, ಸತ್ಯ ಬಿ.ಜಿ, ವಿಠ್ಠಲ್ ಪರೀಟ, ಅರುಣ್ ಕುಮಾರ್, ಶ್ರೀ ಹರ್ಷ, ಸಂಚಾರಿ ಮಧು, ಪ್ರವೀಣ್ ಕೆ.ಬಿ, ಪವನ್ ಕುಮಾರ್ ಕೆ ಮತ್ತು ಮುಂತಾದವರಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ನಿನಲ್ಲಿರುವ ಸಿನಿಮಾ ಸೆನ್ಸಾರ್‌ಗೆ ಸಿದ್ಧವಾಗುತ್ತಿದೆ.
‘ಯುವರತ್ನ’ ಚಿತ್ರೀಕರಣ ಮುಕ್ತಾಯ; ರಿಲೀಸ್ ಯಾವಾಗ ಗೊತ್ತ?