

ಬೆಂಗಳೂರು: ಹೊಸದಾಗಿ ರೂಪುಗೊಂಡಿರುವ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಬೆನ್ನಲ್ಲೇ ನಿರ್ದೇಶಕರನ್ನು ನೇಮಕದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 10 ನಿರ್ದೇಶಕರನ್ನು ನೇಮಕ ಮಾಡಲಾಗಿದೆ.
ವೀರಣ್ಣ ಚರಂತಿಮಠ, ಪ್ರಭಾಕರ ಕೋರೆ, ಹಾಲಪ್ಪ ಆಚಾರ್, ಸೊಗಡು ಶಿವಣ್ಣ, ಶಂಕರ್ ಮುನೇನಕೊಪ್ಪ ಪಾಟೀಲ್, ಯು.ಬಿ.ಬಣಕಾರ, ಅರವಿಂದ ಬೆಲ್ಲದ, ಲಿಂಗಮೂರ್ತಿ, ಮಹಾಂತೇಶ್ ಎಂ ಪಾಟೀಲ್, ವಿಜಯಲಕ್ಷ್ಮಿ ಈಶ್ವರಪ್ಪ ಬಾಳೆಕುಂದ್ರಿ ಅವರನ್ನು ನಿರ್ದೇಶಕರಾಗಿ ನೇಮಿಸಲಾಗಿದೆ. ಪರಮಶಿವಯ್ಯ ಅವರು ಅಧ್ಯಕ್ಷ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.
ನವೆಂಬರ್ 17ರಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಯ ಆದೇಶ ಹೊರಡಿಸಿ, ಆರ್ಥಿಕ ಸಂಕಷ್ಟದಲ್ಲೂ 500 ಕೋಟಿ ರೂ. ಆರಂಭಿಕ ಅನುದಾನ ನೀಡುವುದಾಗಿ ಘೋಷಿಸಿ ಸರ್ಕಾರ ಅಚ್ಚರಿ ಮೂಡಿಸಿತ್ತು.