More

    ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ

    ನವದೆಹಲಿ: ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಈ ಬಗ್ಗೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು​ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

    ಈ ಬಾರಿಯ ಚುನಾವಣೆಯಲ್ಲಿ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಕಲ್ಪಿಸಿದೆ. 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಮತ್ತು ಹಾಸಿಗೆ ಬಿಟ್ಟು ಎದ್ದೇಳಲು ಸಾಧ್ಯವಾಗದವರು, ಗಂಭೀರ ಖಾಯಿಲೆಯಿಂದ ಬಳಲುತ್ತಿರುವವರು ಮನೆಯಿಂದಲೇ ಈ ಬಾರಿ ಮತದಾನ ಮಾಡಬಹುದಾಗಿದೆ.

    ಇದನ್ನೂ ಓದಿ: ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್​: ಮಾಜಿ ಸಿಎಂ ಸಿದ್ದು ಹೇಳಿಕೆ

    ಕರ್ನಾಟಕದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದಾರೆ. ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದು, 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರಿದ್ದಾರೆ.

    ಮನೆಯಿಂದಲೇ ಮತದಾನ ಹೇಗೆ?

    • ಚುನಾವಣೆ ಆಯೋಗದ ವೆಬ್​ಸೈಟ್‌, ವೋಟರ್‌ ಹೆಲ್ಪ್‌ಲೈನ್‌ ಅಥವಾ ಸಕ್ಷಮ್‌ ಆ್ಯಪ್‌ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು.
    • ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್‌ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆ ಮಾಡಲಾಗುತ್ತದೆ.
    • ಮನೆಯಲ್ಲೇ ನಡೆಯುವ ಗೌಪ್ಯ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ ಮಾಡಲಾಗುತ್ತದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts