More

    ಕಾಂಗ್ರೆಸ್​ಗೆ ಚುನಾವಣೆಯಲ್ಲಿ ಸೋಲುವ ಹತಾಶೆ

    ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಸೋಲುವ ಹತಾಶೆ ಕಾಂಗ್ರೆಸ್​ನ್ನು ಕಾಡುತ್ತಿದೆ. ಇದರಿಂದಲೇ ಕುಮಾರ ಸ್ವಾಮಿ ಅವರ ಹೇಳಿಕೆಯನ್ನು ತಿರುಚಿ ಕಾಂಗ್ರೆಸ್​ ನಾಯಕರು ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದು, ಇದಕ್ಕೆ ಜನತೆ ಕಿವಿಗೋಡಬಾರದು ಎಂದು ಜೆಡಿಎಸ್​ ಮಹಿಳಾ ಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಹೇಳಿದರು.

    ನಗರದಲ್ಲಿ ಸೋಮವಾರ ಪತ್ರಿಕಾ ಹೇಳಿ ನೀಡಿರುವ ಅವರು, ಗ್ಯಾರೆಂಟಿಗಳ ಹೆಸರಿನಲ್ಲಿ ಕಾಂಗ್ರೆಸ್​ನವರು ಮಹಿಳೆಯರನ್ನು ದಾರಿ ತಪ್ಪಿಸುತ್ತಿದ್ದಾರೆ ಎಚ್ಚರಿಕೆಯಿಂದ ಇರಿ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆಯೇ ಹೊರತು ಮಹಿಳೆಯರಿಗೆ ಅಪಮಾನ ಮಾಡುವ ರೀತಿಯಲ್ಲಿ ಅವರು ಮಾತನಾಡಿಲ್ಲ ಎಂದರು.
    ಚುನಾವಣೆ ಸಂದರ್ಭದಲ್ಲಿ ಅನಗತ್ಯವಾಗಿ ಕಾಂಗ್ರೆಸ್​ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದಾಗಿನಿಂದ ಇಡೀ ರಾಜ್ಯಕ್ಕೆ ಬರ ಆವರಿಸಿಕೊಂಡಿದೆ. ಜನ ಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಸಂಪೂರ್ಣವಾಗಿ ವಿಲವಾಗಿದೆ ಎಂದು ದೂರಿದರು.
    ಕಾಂಗ್ರೆಸ್​ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದಾಗಿ ಕುಮಾರಸ್ವಾಮಿ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರ ಕುಟುಂಬ ಮಹಿಳೆಯರ ಬಗ್ಗೆ ಅಗೌರವದಿಂದ ನಡೆದುಕೊಂಡಿಲ್ಲ. ನಡೆದುಕೊಳ್ಳುವುದೂ ಇಲ್ಲ. ಕುಮಾರಣ್ಣ ಮುಖ್ಯಮಂತ್ರಿಯಾಗಿದ್ದಾಗ ಗ್ರಾಮವಾಸ್ತವ್ಯ, ರೈತರ ಸಾಲಮನ್ನಾ ಸೇರಿದಂತೆ ಮಹಿಳೆಯರ ಅಭಿವೃದ್ದಿಗೆ ಅನೇಕ ಜನಪರ ಕಾರ್ಯಕ್ರಮಗಳನ್ನು ಕೊಟ್ಟಿದ್ದರು ಎಂದರು.
    ಮಹಿಳೆಯರ ಕಷ್ಟಗಳನ್ನು ಅರಿತಿದ್ದ ಕುಮಾರಸ್ವಾಮಿ ಅವರು ಗ್ರಾಮೀಣ ಭಾಗದಲ್ಲಿ ಸಾರಾಯಿ ನಿಷೇಧ, ಲಾಟರಿ ನಿಷೇಧ ಮಾಡಿ ಬಡವರ ಕುಟುಂಬಗಳಿಗೆ ದಾರಿ ದೀಪವಾಗಿದ್ದಾರೆ. ಇದು ಮಹಿಳೆಯರ ಬಗ್ಗೆ ಇರುವ ಗೌರವ ಎಂದು ತಿಳಿಸಿದ್ದಾರೆ.
    ಐದು ಗ್ಯಾರಂಟಿಗಳಿಗೆ ಅನುದಾನ ಒದಗಿಸಲು ಮದ್ಯದ ಬೆಲೆಯನ್ನು ಹೆಚ್ಚಳ ಮಾಡಿ ಬಡವರನ್ನ ಬೀದಿಗೆ ತಂದು ನಿಲ್ಲಿಸಿದ್ದಾರೆ. ಬಡವರ ಬದುಕಿನ ಮೇಲೆ ರಾಜ್ಯ ಸರ್ಕಾರ ನಡೆಯುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್​ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದ್ದಾರೆ.
    ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿಯಿಂದ ಕಾಂಗ್ರೆಸ್​ ಸರ್ಕಾರಕ್ಕೆ ಆತಂಕ ಸೃಷ್ಠಿಯಾಗಿದೆ. ಕುಮಾರಣ್ಣ ಅವರ ಮೇಲೆ ಆರೋಪಗಳನ್ನ ಮಾಡುವುದಕ್ಕೆ ಯಾವುದೇ ವಿಷಯಗಳಿಲ್ಲದೆ ಮಹಿಳೆಯರನ್ನು ಅವಮಾನಿಸಿದ್ದಾರೆ ಎಂಂದು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts