24ಗಂಟೆಯಲ್ಲಿ ಪತ್ತೆಯಾದ ಹೊಸ ಕರೊನಾ ಪ್ರಕರಣಗಳಿಗಿಂತ ಡಿಸ್​​ಚಾರ್ಜ್​ ಆದವರೇ ಹೆಚ್ಚು; 110 ಮಂದಿ ಸಾವು

Corona virus
Published on

ಬೆಂಗಳೂರು: ರಾಜ್ಯದಲ್ಲಿ ಕರೊನಾದಿಂದ ಚೇತರಿಕೆ ಕಾಣುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದು ಸಮಾಧಾನ ಮೂಡಿಸಿದೆ. ಕಳೆದ 24 ಗಂಟೆಯಲ್ಲಿ ಹೊಸ ಕರೊನಾ ಪ್ರಕರಣಗಳಿಗಿಂತ, ಸೋಂಕಿನಿಂದ ಮುಕ್ತರಾಗಿ ಡಿಸ್​ಚಾರ್ಜ್ ಆದವರ ಸಂಖ್ಯೆಯೇ ತುಸು ಜಾಸ್ತಿ ಇದೆ.
24 ಗಂಟೆಯಲ್ಲಿ 6,259 ಹೊಸ ಕರೊನಾ ಕೇಸ್​​ಗಳು ಪತ್ತೆಯಾಗಿದ್ದು, ಒಟ್ಟು 6,777 ಮಂದಿ ಗುಣಮುಖರಾಗಿ, ಡಿಸ್​​ಚಾರ್ಜ್​ ಆಗಿದ್ದಾರೆ. 110 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗಿನ ಕರೊನಾ ಸೋಂಕಿತರ ಸಂಖ್ಯೆ 1,45.830ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 2704. ಹಾಗೇ ಡಿಸ್​​ಚಾರ್ಜ್​ ಆದವರು 69,272 ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಭಾರತ ಉಪಖಂಡದಲ್ಲಿ ಮುಂದುವರಿದ ನಕ್ಷೆ ರಾಜಕೀಯ; ಪಿಒಕೆಯನ್ನು ತನ್ನದೆಂದು ಹೊಸ ನಕ್ಷೆ ಬರೆದ ಪಾಕಿಸ್ತಾನ

ಇಲ್ಲಿದೆ ನೋಡಿ ಯಾವ ರಾಜ್ಯದಲ್ಲಿ ಎಷ್ಟು ಮಂದಿಯಲ್ಲಿ ಕರೊನಾ ದೃಢಪಟ್ಟಿದೆ, ಮೃತಪಟ್ಟವರು ಎಷ್ಟು ಎಂಬ ಮಾಹಿತಿ..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net