More

    ಭಾರತ್ ಸ್ಕೌಟ್ಸ್, ಗೈಡ್ಸ್‌ನಿಂದ ಮಕ್ಕಳಲ್ಲಿ ಶಿಸ್ತು

    ಆಲೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಲ್ಲಿ ಶಿಸ್ತು, ಸಂಯಮ ಕಲಿಸುವುದರ ಜತೆಗೆ ಸೇವಾ ಮನೋಭಾವವನ್ನು ವೃದ್ಧಿಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಆಲೂರು ತಾಲೂಕು ಅಧ್ಯಕ್ಷ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ.ಕೃಷ್ಣೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.


    ತಾಲೂಕಿನ ಬೈರಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಹಮ್ಮಿಕೊಂಡಿದ್ದ 2023-24 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


    ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಸನ ಜಿಲ್ಲಾ ಉಪಾಧ್ಯಕ್ಷೆ ಹಾಗೂ ವಕೀಲೆ ಎಂ.ಬಿ. ಗಿರಿಜಾಂಬಿಕಾ ಮಾತನಾಡಿದರು. ಹಾಸನದ ಮಿಡ್ ಟೌನ್ ರೋಟರಿಯ ಅಧ್ಯಕ್ಷೆ ಮಮತಾ ಪಾಟೀಲ್, ಜಿಲ್ಲಾ ಸಹಾಯಕ ಆಯುಕ್ತ ಎಂ.ಬಾಲಕೃಷ್ಣ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಜೆ.ಪೃಥ್ವಿ, ಕ್ಷೇತ್ರ ಸಮನ್ವಯಾಧಿಕಾರಿ ಬಿ.ಬಿ.ರವಿ, ಶಿಕ್ಷಣ ಸಂಯೋಜಕರಾದ ತಿಮ್ಮಶೆಟ್ಟಿ, ಮಂಜುಳಾ, ರುದ್ರೇಶ್, ಸ್ಕೌಟ್ಸ್ ಮತ್ತು ಗೈಡ್ಸ್‌ನ ತಾಲೂಕು ಉಪಾಧಕ್ಷೆ ಸಿ.ಎಸ್.ಪೂರ್ಣಿಮಾ, ಕಾರ್ಯದರ್ಶಿ ಕೊಟ್ರೇಶ್ ಎಸ್.ಉಪ್ಪಾರ್, ಭೈರಾಪುರ ಶಾಲಾ ಮುಖ್ಯ ಶಿಕ್ಷಕಿ ಎಲಿಜಬೆತ್ , ಗೈಡ್ಸ್ ಶಿಕ್ಷಕರಾದ ಭಾಗ್ಯಲಕ್ಷ್ಮೀ, ಮಹೇರಾಬಾನು, ರೇಷ್ಮಾ, ಸುನೀತಾ, ಪ್ರಿಯಾಂಕಾ, ಶಿಕ್ಷಕರಾದ ನಾಗರತ್ನ, ಜ್ಯೋತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts