More

    ತಾರತಮ್ಯ ಮಾಡದೆ ಅರ್ಹರಿಗೆ ಪರಿಹಾರ ನೀಡಿ

    ಬೆಳಗಾವಿ: ಪ್ರವಾಹ ಹಾಗೂ ಮಳೆಯಿಂದ ನಷ್ಟವಾಗಿರುವ ಬೆಳೆಗಳಿಗೆ ಪರಿಹಾರ ವಿತರಿಸುವಲ್ಲಿ ತಾರತಮ್ಯ ಮಾಡಲಾಗಿದೆ. ಸಂಬಂಧಿಸಿದ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಅಗತ್ಯ ಕ್ರಮಕ್ಕೆ ಮುಂದಾಗಬೇಕು ಎಂದು ಜಿಪಂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಸದಸ್ಯರು ಒತ್ತಾಯಿಸಿದ್ದಾರೆ.

    ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸದಸ್ಯರು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಾತ್ರ ಬೆಳೆಹಾನಿ ಪರಿಹಾರ ನೀಡಲಾಗಿದೆ. ಮಳೆಯಾಶ್ರಿತ ಪ್ರದೇಶಗಳಲ್ಲಿ ಪರಿಹಾರ ನೀಡುವಲ್ಲಿ ಗ್ರಾಮಲೆಕ್ಕಾಧಿಕಾರಿ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ನಿರ್ಲಕ್ಷೃ ಮಾಡಿರುವುದು ಸರಿಯಲ್ಲ. ತಕ್ಷಣ ಪರಿಹಾರ ವಿತರಣೆ ಕಾರ್ಯ ಆರಂಭವಾಗಬೇಕು ಎಂದು ಆಗ್ರಹಿಸಿದರು.

    ಸಮಿತಿ ಅಧ್ಯಕ್ಷ ಶಂಕರ ಮಾಡಲಗಿ ಮಾತನಾಡಿ, ಜಿಪಂ ವ್ಯಾಪ್ತಿಯ ಇಲಾಖೆಗಳಿಗೆ ಸಾಕಷ್ಟು ಅನುದಾನ ಬಿಡುಗಡೆಯಾದರೂ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಬಳಕೆಯಾಗಿಲ್ಲ. ಮಾರ್ಚ್ ಅಂತ್ಯದ ಒಳಗೆ ಅನುದಾನ ಬಳಕೆಯಾಗಬೇಕು. ಕಾರಣ ನೀಡಿ ಅನುದಾನ ವಾಪಾಸ್ ಕಳುಹಿಸಬಾರದು. ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ತಕ್ಷಣ ಪಟ್ಟಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸದಸ್ಯ ಗೋವಿಂದ ಕೊಪ್ಪದ ಮಾತನಾಡಿ, ನದಿಗಳ ಪ್ರವಾಹ ಮತ್ತು ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿ 2.44 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಪ್ರತಿ ರೈತರಿಗೆ ಕನಿಷ್ಠ 5 ಎಕರೆ ವರೆಗೆ ಬೆಳೆ ಹಾನಿ ಪರಿಹಾರ ನೀಡಬೇಕು. ಆದರೆ, ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಿರುವುದು ಸರಿಯಲ್ಲ. ಕೆಲ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸದೆ ವರದಿ ಸಲ್ಲಿಸಿರುವುದು ಕಂಡುಬಂದಿದೆ. ಅಧಿಕಾರಿಗಳು ಮರುಪರಿಶೀಲನೆ ನಡೆಸಿ ವರದಿ ಸಲ್ಲಿಸಿ ಅರ್ಹರಿಗೆ ಪರಿಹಾರ ವಿತರಿಸಬೇಕು ಎಂದರು.

    ಸಮಿತಿ ಸದಸ್ಯ ಸಿದ್ಧಗೌಡ ಸುಣಗಾರ, ನಿಂಗಪ್ಪ ಅರಕೇರಿ, ಸುಜಾತಾ ಚೌಗುಲೆ, ಜಿಪಂ ಉಪ ಕಾರ್ಯದರ್ಶಿ( ಅಭಿವೃದ್ಧಿ) ಎಸ್.ಬಿ.ಮುಳ್ಳಳ್ಳಿ ಸೇರಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts