ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅತ್ತ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದು, ಇತ್ತ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿರುಸಿನ ಚರ್ಚೆ ನಡೆಯುತ್ತಿದೆ.
2023ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊರವಲಯದ ರೆಸಾರ್ಟೊಂದರಲ್ಲಿ ಇಂದು ಜಿಲ್ಲಾವಾರು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಘಟಾನುಘಟಿ ನಾಯಕರ ಸಮ್ಮುಖದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ 16 ಜಿಲ್ಲೆಗಳ ಜಿಲ್ಲಾ ಸಮಿತಿ ಸದಸ್ಯರು ಭಾಗಿಯಾಗಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವಾರು ನಾಯಕರು ಭಾಗಿಯಾಗಿದ್ದು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ, ಬೆಳಗಾವಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಸದಸ್ಯರೂ ಉಪಸ್ಥಿತರಿದ್ದಾರೆ.
ಇದನ್ನೂ ಓದಿ: ಧೂಮಪಾನ ಮಾಡಿ 8 ಲಕ್ಷ ರೂ. ಕಳ್ಕೊಂಡ ಉದ್ಯೋಗಿ; 355 ಗಂಟೆ 19 ನಿಮಿಷಗಳ ಸ್ಮೋಕಿಂಗ್!
ಚನ್ನಗಿರಿ ಶಾಸಕ ವಿರೂಪಾಕ್ಷಪ್ಪ ಪ್ರಕರಣದ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು, ಈ ಸಲ ಅವರಿಗೆ ಟಿಕೆಟ್ ಕೊಡುವುದು ಸರಿಯಲ್ಲ ಎನ್ನುವ ಜತೆಗೆ, ಅವರ ಪ್ರಕರಣ ಹೈಕಮಾಂಡ್ ನಾಯಕರಿಗೇ ಬಿಡೋಣ ಎಂದೂ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಅಲ್ಲದೆ ಒಂದು ವೇಳೆ ಮಾಡಾಳ್ ವಿರೂಪಾಕ್ಷಪ್ಪ ತಮ್ಮ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಬೇರೆ ಯಾರನ್ನಾದ್ರೂ ಸೂಚಿಸಿದರೆ ಅದನ್ನು ಅವರನ್ನು ಪರಿಗಣಿಸಬೇಕೇ ಬೇಡವೇ? ಎಂಬುದರ ಕುರಿತು ಕೂಡ ಈ ಸಭೆಯಲ್ಲಿ ಚರ್ಚೆ ನಡೆದಿದೆ.
ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ
ಪ್ರಾಮಾಣಿಕ ಎಸ್ಐ ಎಂದು ಗಣರಾಜ್ಯೋತ್ಸವದಂದು ಪ್ರಶಸ್ತಿ ಪಡೆದಿದ್ದಾಕೆ 5 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ಲು!