

ಹುಬ್ಬಳ್ಳಿ: ಇಲ್ಲಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ (ಕೆಸಿಸಿಐ) ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರೊಂದಿಗೆ ಶನಿವಾರ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರೇಣುಕಾ ಸುಕುಮಾರ ಅವರು, ಹುಬ್ಬಳ್ಳಿ ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ, ಟ್ರಾಫಿಕ್ ಹಾಗೂ ಅಪರಾಧಗಳ ಕುರಿತು ಮಾಹಿತಿ ನೀಡಿ, ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಅವಳಿನಗರದಲ್ಲಿ ವಿಶೇಷವಾಗಿ ಮಹಿಳೆಯರ ಸುರತೆಗಾಗಿ ರಚಿಸಲಾದ ಚೆನ್ನಮ್ಮ ಪಡೆ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ಸಾರ್ವಜನಿಕರು ಅಪರಾಧ ಚಟುವಟಿಕೆಗಳ ಬಗ್ಗೆ ಗಮನಕ್ಕೆ ಬಂದಾಗ ಪೊಲೀಸರಿಗೆ ಮಾಹಿತಿ ನೀಡಬೇಕು. ಅಪರಾಧ ತಡೆಗೆ ಜನರ ಸಹಕಾರವೂ ಮುಖ್ಯವಾಗುತ್ತದೆ ಎಂದರು.
ಜನರು ಅನಗತ್ಯ ಮೆಸೇಜ್, ಕರೆಗಳಿಗೆ ಉತ್ತರಿಸಬಾರದು. ಸೈಬರ್ ಕೆಂ ಬಗ್ಗೆ ಜಾಗ್ರತೆ ವಹಿಸಬೇಕೆಂದು ಕೋರಿದರು. ಮಹಿಳೆಯರು ಹಾಗೂ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ, ಹಲವು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.
ಸಂಸ್ಥೆಯ ಪರವಾಗಿ ಪೊಲೀಸ್ ಆಯುಕ್ತರನ್ನು ಸನ್ಮಾನಿಸಲಾಯಿತು. ಡಿಸಿಪಿ ಕುಶಾಲ್ ಚೌಕ್ಸೆ, ಎಸಿಪಿ ಯು.ಬಿ. ಚಿಕ್ಕಮಠ, ಇನ್ಸಪೆಕ್ಟರ್ ಬಿ.ಕೆ. ಪಾಟೀಲ, ಇತರರು ಪಾಲ್ಗೊಂಡಿದ್ದರು.
ಕೆಸಿಸಿಐ ಉಪಾಧ್ಯಕ್ಷ ಪ್ರವಿಣ ಅಗಡಿ, ಜೊತೆ ಗೌರವ ಕಾರ್ಯದರ್ಶಿ ಮಹೇಂದ್ರ ಸಿಂಘಿ, ಮಾಜಿ ಅಧ್ಯ ಎಂ.ಸಿ. ಹಿರೇಮಠ ಉಪಸ್ಥಿತರಿದ್ದರು.
ಕೆಸಿಸಿಐ ಅಧ್ಯ ಎಸ್.ಪಿ. ಸಂಶಿಮಠ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ರವೀಂದ್ರ ಬಳಿಗಾರ ವಂದಿಸಿದರು.