More

    ರಾಸುಗಳಿಗೆ ಕಾಯಿಲೆ ಬಂದರೆ ಆರ್ಥಿಕ ಸಂಕಷ್ಟ

    ಬೀರೂರು: ಜಾನುವಾರುಗಳಿಗೆ ಕಾಲುಬಾಯಿ ರೋಗ ತಡೆಗಟ್ಟುವ ಉದ್ದೇಶದಿಂದ ಪಶುಸಂಗೋಪನಾ ಇಲಾಖೆಯಿಂದ ಪ್ರತಿ ರಾಸುಗಳಿಗೂ ಲಸಿಕೆ ನೀಡಲಾಗುತ್ತಿದೆ ಎಂದು ಪಶು ವೈದ್ಯ ಡಾ. ಎಸ್.ಎಂ.ಮೋಹನ್ ತಿಳಿಸಿದರು.

    ಪಟ್ಟಣ ಸಮೀಪದ ಗಾಳೀಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾಸುಗಳಿಗೆ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತರಿಗೆ ಆರ್ಥಿಕ ಸಂಕಷ್ಟ ಉಂಟುಮಾಡುವ ಕಾಲುಬಾಯಿ ರೋಗದಿಂದ ರಾಜ್ಯವನ್ನು ಮುಕ್ತ ಮಾಡಲು ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಲಸಿಕೆ ನೀಡಲಾಗುತ್ತಿದೆ. ರಾಸುಗಳನ್ನು ರೋಗಗಳಿಂದ ಪಾರು ಮಾಡಿ ಪಶು ಸಂಪತ್ತು ಬಲಗೊಳಿಸುವ ಉದ್ದೇಶದಿಂದ ಸರ್ಕಾರ ವರ್ಷದಲ್ಲಿ ಎರಡು ಬಾರಿ ಉಚಿತ ಲಸಿಕೆ ನೀಡುತ್ತಿದೆ ಎಂದರು.

    ಜಾತ್ರೆ, ಸಂತೆಯಲ್ಲಿ ಹೊಸದಾಗಿ ಜಾನುವಾರು ಖರೀದಿಸುವುದರಿಂದ ಈ ರೋಗ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತದೆ. ಇದೊಂದು ವೈರಾಣು ರೋಗ. ಹಸು, ಎಮ್ಮೆ, ಹಂದಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ರೋಗದಿಂದ ಗುಣಮುಖವಾದರೂ ಮುಂದೆ ಗರ್ಭ ಕಟ್ಟುವಿಕೆಯಲ್ಲಿ ವಿಳಂಬ, ಸಾಮರ್ಥ್ಯ ಮತ್ತು ಇಳುವರಿಯಲ್ಲಿ ಇಳಿಮುಖವಾಗುತ್ತದೆ. ಇದರಿಂದ ಹೈನುಗಾರರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ. ಹಿಂದೆ ಎಷ್ಟು ಬಾರಿ ಲಸಿಕೆ ಹಾಕಿದ್ದರೂ ಪ್ರತಿ ಆರು ತಿಂಗಳಿಗೊಮ್ಮೆ ಲಸಿಕೆ ಹಾಕಿಸುವುದು ಕಡ್ಡಾಯ ಎಂದು ತಿಳಿಸಿದರು.</

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts