

Disha Patani : ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆಯ ಮುಂದೆ ಶುಕ್ರವಾರ ಬೆಳಿಗ್ಗೆಯೇ ಗುಂಡಿನ ದಾಳಿ ನಡೆದಿದೆ. ಈ ದಾಳಿಯ ಹೊಣೆ ಹೊತ್ತ ಗೋಲ್ಡಿ ಬ್ರಾರ್ ಮತ್ತು ರೋಹಿತ್ ಗೋದಾರ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ನಟಿ ಹಾಗೂ ಅವರ ಫ್ಯಾಮಿಲಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಈ ಸುದ್ದಿ ಬೆನ್ನಲ್ಲೇ ಇದೀಗ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಟಿಯ ತಂದೆ ಜೊತೆ ಮಾತನಾಡಿ ಭದ್ರತೆ ಒದಗಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಸಿಎಂ ಯೋಗಿ ದಿಶಾ ( Disha Patani ) ಅವರ ತಂದೆ ಜಗದೀಶ್ ಪಟ್ನಿ ಅವರೊಂದಿಗೆ ಮಾತನಾಡಿದ್ದಾರೆ. ಸಿಎಂ ಯೋಗಿ ಪಟ್ನಿ ಕುಟುಂಬಕ್ಕೆ ಭದ್ರತೆಯ ಭರವಸೆ ನೀಡಿದ್ದಾರೆ.
ಗುಂಡಿನ ದಾಳಿ ಪ್ರಕರಣದಲ್ಲಿ, ಸಿಎಂ ಯೋಗಿ ಕೂಡ ಘಟನೆಯನ್ನು ಶೀಘ್ರದಲ್ಲೇ ಬಹಿರಂಗಪಡಿಸಲು ಸೂಚನೆ ನೀಡಿದ್ದಾರೆ. ದಿಶಾ ಪಟ್ನಿ ಅವರ ತಂದೆ ಸಿಎಂ ಯೋಗಿ ಅವರೊಂದಿಗೆ ಮಾತನಾಡಿರುವುದನ್ನು ದೃಢಪಡಿಸಿದ್ದಾರೆ.
ನಡೆದಿದ್ದೇನು?:
ಕೆಲವು ದಿನಗಳ ಹಿಂದೆ ದಿಶಾ ಪಟಾನಿ ಅವರ ಸಹೋದರಿ ಖುಷ್ಬೂ ಪಟಾನಿ ಮಾಡಿದ ಹೇಳಿಕೆಗಳು ಒಂದು ಗುಂಪಿನ ಭಾವನೆಗಳಿಗೆ ನೋವುಂಟು ಮಾಡಿವೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ವ್ಯಕ್ತಪಡಿಸುತ್ತಿದ್ದಾರೆ. ಇದೇ ದಾಳಿಗೆ ಕಾರಣ ಎಂದು ಸ್ಥಳೀಯರು ಕೂಡ ನಂಬಿದ್ದಾರೆ ಎಂದು ವರದಿ ಉಲ್ಲೇಖಿಸಿದ್ದಾರೆ.
ಉತ್ತರ ಪ್ರದೇಶದ ಬರೇಲಿಯಲ್ಲಿರುವ ಅವರ ನಿವಾಸದಲ್ಲಿ ಈ ಸಂಭವಿಸಿದೆ. ಆದರೆ, ಗುಂಡಿನ ದಾಳಿಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ನಟಿಯ ತಂದೆ ಜಗದೀಶ್ ಪಟಾನಿ ಈ ಸಂಬಂಧ ಪೊಲೀಸ್ ದೂರು ದಾಖಲಿಸಿದ ನಂತರ, ದಾಳಿಕೋರರನ್ನು ಬಂಧಿಸಲು ಪೊಲೀಸರು ಐದು ತಂಡಗಳನ್ನು ರಚಿಸಿದ್ದಾರೆ. ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿ ಈ ಘಟನೆ ನಡೆದಿದೆ.