ಖಾಸಗಿ ಶಾಲೆಯಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ; ವ್ಯಾಪಕ ಖಂಡನೆ

National Flag
Published on

ಚಿತ್ರದುರ್ಗ: ಖಾಸಗಿ ಶಾಲೆಯೊಂದರಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ.

ಘಟನೆಯು ಚಳ್ಳಕೆರೆ ತಾಲ್ಲೂಕಿನ ಚಿನ್ಮಯ್​ ಶಾಲೆಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋ ವೈರಲ್​ ಆಗಿದ್ದು, ಈ ಕುರಿತು ವ್ಯಾಪಕ ಖಂಡನೆ ವ್ಯಕ್ತವಾಗಿದೆ. ನೆಟ್ಟಿಗರು ಶಾಲೆಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಶಾಲೆ ಮುಂಭಾಗ ಇರುವ ಕಸದ ತೊಟ್ಟಿಯಲ್ಲಿ ರಾಷ್ಟ್ರಧ್ವಜ ಪತ್ತೆಯಾಗಿದ್ದು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಚಳ್ಳಕೆರೆ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net