

ವಿಜಯವಾಣಿ ಸುದ್ದಿಜಾಲ ಬೈಂದೂರು
ರಾಜ್ಯ ಸರ್ಕಾರ ಅಶಕ್ತರಿಗೆ, ದುರ್ಬಲರಿಗೆ ಆರ್ಥಿಕ ಶಕ್ತಿ ಕಲ್ಪಿಸುವ ನಿಟ್ಟಿನಲ್ಲಿ ಪಂಚಗ್ಯಾರಂಟಿ ಯೋಜನೆ ಜಾರಿಗೊಳಿಸಿ, ವಾರ್ಷಿಕವಾಗಿ 53 ಸಾವಿರ ಕೋಟಿ ರೂ. ಅನುದಾನ ಒದಗಿಸುತ್ತಿದೆ. ಆದರೆ ಕೆಲವು ಫಲಾನುಭವಿಗಳೇ ಈ ಯೋಜನೆ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ. ಇದು ವಿಷಾದನೀಯ ಸಂಗತಿ ಎಂದು ಪ್ರಗತಿಪರ ಕೃಷಿಕ ಹಾಗೂ ಖಂಬದಕೋಣೆ ರೈತ ಸೇವಾ ಸಹಕಾರಿ ಸಂಘ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.
ಬೈಂದೂರು ತಾಲೂಕು ಪಂಚಾಯಿತಿ ಆವರಣದಲ್ಲಿ ಶುಕ್ರವಾರ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕೊಲ್ಲೂರು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ, ಪಪಂ ನಾಮನಿರ್ದೇಶಿತ ಸದಸ್ಯರಾದ ಸದಾಶಿವ ಪಡುವರಿ, ನಾಗರಾಜ ಗಾಣಿಗ, ಜಿಪಂ ಮಾಜಿ ಸದಸ್ಯ ಶಂಕರ ಪೂಜಾರಿ, ಅನುಷ್ಠಾನ ಸಮಿತಿ ಸದಸ್ಯರಾದ ಪ್ರಭಾಕರ ನಾಯ್ಕ, ಮಾಲತಿ ಶಿವಾನಂದ, ರಾಮ ಪೂಜಾರಿ, ಗುಲಾಬಿ ಪೂಜಾರಿ, ಸೂರ್ಯಕಾಂತಿ ಡಿ., ಅನಿಶ್ ಕುಮಾರ್, ಲಕ್ಷ್ಮಣ ಆಚಾರ್ಯ, ಗಣೇಶ ಗಾಣಿಗ, ರಾಘವೇಂದ್ರ ಬಿಲ್ಲವ, ದೇವದಾಸ ವಿ.ಜೆ., ಅಪ್ಪಣ್ಣ ಶೆಟ್ಟಿ, ಬಾಬು ದೇವಾಡಿಗ, ರಾಮಚಂದ್ರ ಖಾರ್ವಿ, ಮುಕ್ರಿ ಮೊಹಮ್ಮದ್ ಅಲ್ತಾಫ್ ಶಿರೂರು, ತಾಪಂ ಅಧಿಕಾರಿ ಸುರೇಶ ಉಪಸ್ಥಿತರಿದ್ದರು. ಗಣೇಶ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.