More

    ಸಂಪುಟದಿಂದ ಮಧು ಬಂಗಾರಪ್ಪ ವಜಾ ಮಾಡಿ

    ಶಿವಮೊಗ್ಗ: ಕೇಂದ್ರ ಸರ್ಕಾರದ ವಿಕಸಿತ ಭಾರತ ಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಾಕೀತು ಮಾಡುತ್ತಿದ್ದು ತಕ್ಷಣವೇ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಒತ್ತಾಯಿಸಿದರು.

    ಸಚಿವ ಮಧು ಬಂಗಾರಪ್ಪ ಅವರು ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ರೀತಿಯಲ್ಲಿ ಅಧಿಕಾರಿಗಳೊಂದಿಗೆ ನಡೆದುಕೊಳ್ಳುತ್ತಿದ್ದಾರೆ. ಕೆಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದು ಅಧಿಕಾರಿಗಳ ಹೊಣೆಗಾರಿಕೆ. ಹೀಗಾಗಿ ವಿಕಸಿತ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅದನ್ನು ಸಹಿಸದೆ ಅಧಿಕಾರಿಗಳಿಗೆ ಧಮಕಿ ಹಾಕುತ್ತಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
    ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಲಾನುಭವಿಗಳಿಗೆ ತಲುಪಿರುವ ಬಗ್ಗೆ ಹಾಗೂ ತಲುಪಿಸುವ ಬಗ್ಗೆಯೂ ವಿಕಸಿತ ಭಾರತ ಯಾತ್ರೆಯನ್ನು ಎಲ್ಲ ಗ್ರಾಪಂಗಳಲ್ಲಿ ನಡೆಸಲಾಗುತ್ತಿದೆ. ಸರ್ಕಾರಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವಾಗ ಯಾವುದೇ ಪಕ್ಷಪಾತ ಮಾಡುವುದಿಲ್ಲವೆಂದು ಪ್ರಮಾಣ ವಚನ ಸ್ವೀಕರಿಸಿರುವ ಕ್ಯಾಬಿನೆಟ್ ಸಚಿವರು ಸಂವಿಧಾನದ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.
    ಸರ್ಕಾರಿ ನೌಕರರನ್ನು ವಿಕಸಿತ ಭಾರತ ಯಾತ್ರೆಗೆ ಕಳಿಸಿದಂತೆ ಜಿಪಂ ಸಿಇಒಗೆ ಸಚಿವರು ಸೂಚನೆ ನೀಡಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಯೊಂದಿಗೆ ಚರ್ಚೆ ಮಾಡುತ್ತೇವೆ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬಾರದೆಂದರೆ ಅದನ್ನು ಸಚಿವರು ಸ್ಪಷ್ಟಪಡಿಸಲಿ ಎಂದರು.
    ಎಂಎಲ್‌ಸಿ ಎಸ್.ರುದ್ರೇಗೌಡ, ರಾಜ್ಯ ಪ್ರಕೋಷ್ಠಗಳ ಸಂಚಾಲಕ ಎಸ್.ದತ್ತಾತ್ರಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮುಖಂಡರಾದ ಡಾ. ರಾಜನಂದಿನಿ ಕಾಗೋಡು, ಶಿವರಾಜ್, ರುದ್ರೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts