ಶಿವಮೊಗ್ಗ: ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿAದ ನಲುಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿ-Àಲವಾಗಿರುವ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಸರ್ಕಾರವನ್ನು ವಜಾಗೊಳಿಸಿ ರಾಷ್ಟçಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಪದಾಽಕಾರಿಗಳು ಗುರುವಾರ ಜಿಲ್ಲಾಽಕಾರಿ ಕಚೇರಿ ಎದುರು ತಮಟೆ ಬಾರಿಸಿ ಪ್ರತಿಭಟನೆ ನಡೆಸಿದರು.
ಈಶಾನ್ಯ ರಾಜ್ಯ ಮಣಿಪುರ ಮೂರು ತಿಂಗಳಿನಿAದ ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರ ನಡೆಯುತ್ತಿದೆ. ಇತ್ತೀಚೆಗೆ ಕುಕಿ ಸಮುದಾಯದ ಮಹಿಳೆಯರಿಬ್ಬರನ್ನು ಬೆತ್ತಲೆಗೊಳಿಸಿ ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿರುವುದು ಆಘಾತಕಾರಿಯಾಗಿದ್ದು ಹಿಂಸಾಚಾರದ ಕರಾಳ ಮುಖವನ್ನು ಇಡೀ ದೇಶಕ್ಕೆ ಪರಿಚಯಿಸಿದೆ ಎಂದು ಕಿಡಿಕಾರಿದರು.
ಮಹಿಳೆಯರನ್ನು ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಿ ಅತ್ಯಾಚಾರ ಮಾಡಿದ ಕಿಡಿಗೇಡಿಗಳನ್ನು ತಕ್ಷಣವೇ ಗಲ್ಲಿಗೇರಿಸಬೇಕು. ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿರುವ ಈ ಘಟನೆಯ ಪೂರ್ಣ ಹೊಣೆಗಾರಿಕೆಯನ್ನು ಕೇಂದ್ರ ಸರ್ಕಾರ ಮತ್ತು ಅಲ್ಲಿನ ರಾಜ್ಯ ಸರ್ಕಾರವೇ ಹೊತ್ತುಕೊಳ್ಳಬೇಕಿದೆ. ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿ, ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಲ್ಲದೆ ಅದರ ವಿಡಿಯೋ ಮಾಡಿದ್ದರೂ ಸರ್ಕಾರಗಳು ಕಣ್ಮುಚ್ಚಿಯೇ ಕುಳಿತಿದ್ದವು. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ದೂರಿದರು.
ಮಣಿಪುರದಲ್ಲಿ ಬಿಜೆಪಿ ಸರ್ಕಾರವಿದ್ದರೂ ಹಿಂಸಾಚಾರ ತಡೆಯುವಲ್ಲಿ ವಿ-Àಲವಾಗಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಬೇಕೆಂದು ಆಗ್ರಹಿಸಿದರು.
ಡಿಎಸ್‌ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ, ಪ್ರಮುಖರಾದ ಎಂ.ಏಳುಕೋಟಿ, ಹರಿಗೆ ರವಿ, ಶಿವಬಸಪ್ಪ, ಬಸವರಾಜ್ ಹಸ್ವಿ, ದೇವೇಂದ್ರಪ್ಪ, ರಮೇಶ್ ಚಿಕ್ಕಮರಡಿ, ಶಿವಬಸಪ್ಪ, ಗಂಗಮಾಳಮ್ಮ, ಸವಿತಾ ಗಾಜನೂರು ಇತರರಿದ್ದರು.