More

    ಮಣಿಪುರ ಸರ್ಕಾರ ವಜಾ ಮಾಡಿ

    ಎನ್.ಆರ್.ಪುರ: ಮಣಿಪುರದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದರೂ ಪ್ರಧಾನಿ ನರೇಂದ್ರ ಮೋದಿ ಸೂಕ್ತ ಕ್ರಮ ಕೈಗೊಂಡಿಲ್ಲ. ಮಣಿಪುರ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಒತ್ತಾಯಿಸಿದರು.

    ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಕೇಂದ್ರ ಸರ್ಕಾರ ವಿಲವಾಗಿದೆ. ಮಣಿಪುರ ರಾಜ್ಯ ಹೊತ್ತಿ ಉರಿಯುತ್ತಿದ್ದರೂ ಪ್ರಧಾನಿ ಗಮನ ನೀಡಿರಲಿಲ್ಲ. ಸುಪ್ರೀಂಕೋರ್ಟ್ ಹೇಳಿದ ಮೇಲೆ ಬಿಜೆಪಿ ಸರ್ಕಾರ ಎಚ್ಚೆತ್ತುಕೊಂಡಿದೆ. ಮಣಿಪುರ ಸರ್ಕಾರವನ್ನು ತಕ್ಷಣ ವಜಾಗೊಳಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಮಣಿಪುರದಲ್ಲಿ ಸಂತ್ರಸ್ತರನ್ನು ಭೇಟಿ ಮಾಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೋದರೆ ಅಲ್ಲಿನ ಸರ್ಕಾರ ಅಡ್ಡಿಪಡಿಸುತ್ತಿದೆ. ಡಾ. ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ ಎಂದು ಟೀಕಿಸಿದರು.
    ಬಿಜೆಪಿ ಚೇತರಿಸಿಕೊಂಡಿಲ್ಲ: ವಿಧಾನಸಭೆ ಚುನಾವಣೆ ಸೋಲಿಗೆ ಇನ್ನೂ ಬಿಜೆಪಿ ಚೇತರಿಸಿಕೊಂಡಿಲ್ಲ. ಸಂಸದೆ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್‌ನ 5 ಗ್ಯಾರಂಟಿಗಳ ಬಗ್ಗೆ ಲೇವಡಿ ಮಾಡಿದ್ದಾರೆ. ಶೋಭಾ ಹಾಗೂ ಸಿ.ಟಿ.ರವಿ ಅವರು ಕಾಂಗ್ರೆಸ್ ಸರ್ಕಾರದ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಸಿ.ಟಿ.ರವಿಗೆ ಮತದಾರರೇ ತಕ್ಕ ಪಾಠ ಕಲಿಸಿದ್ದಾರೆ. ಬಡವರಿಗೆ ಅಕ್ಕಿ ತಲುಪಿಸುವ ಜವಾಬ್ದಾರಿ ಶೋಭಾ ಮೇಲಿದೆ. ಬಿಜೆಪಿ ಆಂತರಿಕ ಕಿತ್ತಾಟದ ಕಾರಣ ಇನ್ನೂ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಬಿಜೆಪಿ ಕಾಂಗ್ರೆಸ್ ದೂಷಿಸುವ ಬದಲು ಅವರ ಪಕ್ಷವನ್ನು ಸರಿಪಡಿಸಿಕೊಳ್ಳಲಿ ಎಂದು ಡಾ. ಕೆ.ಪಿ.ಅಂಶುಮಂತ್ ತಿರುಗೇಟು ನೀಡಿದರು.
    3 ಗ್ಯಾರಂಟಿ ಯಶಸ್ವಿ: ಕಾಂಗ್ರೆಸ್ ಭರವಸೆ ನೀಡಿದಂತೆ 5 ಗ್ಯಾರಂಟಿಗಳಲ್ಲಿ ಈಗಾಗಲೇ 3 ಗ್ಯಾರಂಟಿ ಅನುಷ್ಠಾನಕ್ಕೆ ಬಂದಿದೆ. 1.50 ಕೋಟಿ ಜನರು ಗೃಹಜ್ಯೋತಿಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಓಡಾಡುತ್ತಿದ್ದಾರೆ. ಬಿಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ ಬದಲು ಹಣ ನೀಡುತ್ತೇವೆ. ಗೃಹಲಕ್ಷ್ಮೀ ಯೋಜನೆಗೆ ಕೆಲವು ತಾಂತ್ರಿಕ ಅಡಚಣೆಯಾಗಿದೆ. ಅರ್ಹ ಲಾನುಭವಿಗಳಿಗೆ ತಲುಪಿಸುತ್ತೇವೆ ಎಂದು ಅಂಶುಮಂತ್ ಹೇಳಿದರು.
    ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೇರ್‌ಬೈಲು ನಟರಾಜ, ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ, ನಗರ ಘಟಕದ ಅಧ್ಯಕ್ಷ ಬಿಳಾಲುಮನೆ ಉಪೇಂದ್ರ, ಕಾಂಗ್ರೆಸ್ ಮುಖಂಡರಾದ ಇ.ಸಿ.ಜೋಯಿ, ಪೇಟೆ ಸತೀಶ್, ಕಿರಣ್, ಜುಬೇದಾ, ಕೆ.ಎ.ಅಬೂಬಕರ್, ಎಸ್.ಡಿ.ರಾಜೇಂದ್ರ, ಅಂಜುಂ, ನಾಗರಾಜ್, ಇಮ್ರಾನ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts