More

    ಮಣಿಪುರ ಸರ್ಕಾರವನ್ನು ವಜಾ ಮಾಡಿ

    ಚಿಕ್ಕಮಗಳೂರು: ಮಣಿಪುರದ ಮಹಿಳೆಯರಿಗೆ ಕಿರುಕುಳ ನೀಡಿರುವುದನ್ನು ಖಂಡಿಸಿ ಜಿಲ್ಲಾ ಬಹುಜನ ಸಮಾಜ ಪಕ್ಷದ ಮುಖಂಡರು ನಗರದ ಆಜಾದ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

    ಶೋಷಿತ ಸಮುದಾಯದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ ನಡು ಬೀದಿಯಲ್ಲಿ ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿರುವ ಘಟನೆಯಿಂದ ದೇಶವೇ ತಲೆ ತಗ್ಗಿಸುವಂತಾಗಿದೆ. ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಿ ಶಿಕ್ಷೆ ನೀಡುವಲ್ಲಿ ವಿಫಲವಾಗಿರುವ ಅಲ್ಲಿನ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಕುರ್ಕಿ ಒತ್ತಾಯಿಸಿದರು.
    ಮಣಿಪುರದ ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿರುವ ಕುಕೀ ಮತ್ತು ಮೈತೇಯಿ ಸಮುದಾಯಗಳ ನಡುವೆ 80 ದಿನಗಳಿಂದ ಜನಾಂಗೀಯ ಘರ್ಷಣೆ ಉಂಟಾಗಿ ಮಕ್ಕಳು,ಮಹಿಳೆಯರು ಸೇರಿ ಸುಮಾರು 156 ಮಂದಿ ಬಲಿಯಾಗಿದ್ದಾರೆ. ಕುಕೀ ಸಮುದಾಯ ಮನೆ, ಚರ್ಚ್‌ಗಳನ್ನು ಸುಟ್ಟು ಹಾಕಿ ಹಿಂಸಾಚಾರ ನೀಡಲಾಗುತ್ತಿದೆ ಎಂದು ದೂರಿದರು.
    ಮೈತೇಯಿ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸುವ ಸಂಬಂಧ ಹೈಕೋರ್ಟ್ ತೀರ್ಪು ಬಂದ ಮೇಲೆ ಹಿಂಸಾಚಾರ ಹೆಚ್ಚಾಗಿದೆ. ರಾಜಕೀಯವಾಗಿ ಬಲಿಷ್ಠರಾದ ಮತ್ತು ಜನಸಂಖ್ಯೆಯಲ್ಲಿ ಹೆಚ್ಚಾಗಿರುವ ಮೈತೇಯಿ ಸಮಾಜಕ್ಕೆ ಮೀಸಲಾತಿ ಬಲದೊರಕಿರುವುದು ಹಿಂಸಾಚಾರಕ್ಕೆ ಕಾರಣವಾಗಿದೆ ಎಂದು ದೂರಿದರು.
    ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್, ಕಾರ್ಯದರ್ಶಿಗಳಾದ ಕೆ.ಬಿ.ಸುಧಾ, ಜಾಕೀರ್ ಆಲಿಖಾನ್, ಜಿಲ್ಲಾ ಉಪಾಧ್ಯಕ್ಷ ಯು.ಬಿ.ಗಂಗಾಧರ್, ಪ್ರಧಾನ ಕಾರ್ಯದರ್ಶಿ ಆರ್.ವಸಂತ್, ಉಸ್ತುವಾರಿ ಯು.ಬಿ.ಮಂಜಯ್ಯ, ಕಾರ್ಯದರ್ಶಿ ಪಿ.ಕೆ.ಮಂಜುನಾಥ್, ತಾಲೂಕು ಅಧ್ಯಕ್ಷ ಎಚ್.ಕುಮಾರ್, ಸಂಯೋಜಕಿ ಕೆ.ಎಸ್.ಮಂಜುಳಾ, ಖಜಾಂಚಿ ರತ್ನಾ, ಮೂಡಿಗೆರೆ ಅಧ್ಯಕ್ಷ ಮಹೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts