ಸಮಸ್ಯೆಗೆ ಕಾರಣವಾಗಿರುವ ಗುತ್ತಿಗೆ ಸಿಬ್ಬಂದಿ ಬಿಡುಗಡೆಗೆ ಕ್ರಮ

blank

ಬೇಲೂರು: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸಾಕಷ್ಟು ಸಮಸ್ಯೆಗಳಿಗೆ ಕಾರಣವಾಗಿರುವ ಮತ್ತು ಆಡಳಿತ ವೈದ್ಯಾಧಿಕಾರಿ ಮಾತು ಕೇಳದ ಗುತ್ತಿಗೆ ಸಿಬ್ಬಂದಿಯನ್ನು ಇಲ್ಲಿಂದ ಬಿಡುಗಡೆ ಮಾಡಲು ಜಿಲ್ಲಾ ವೈದ್ಯಾಧಿಕಾರಿಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಆಯೋಜಿಸಿದ್ದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿ, ಖಾಸಗಿ ಏಜೆನ್ಸಿ ಸಿಬ್ಬಂದಿಯಿಂದ ಸರ್ಕಾರಿ ಆಸ್ಪತ್ರೆಗೆ ಕೆಟ್ಟ ಹೆಸರು ಬರುತ್ತಿದ್ದು, ಈ ವಿಚಾರವಾಗಿ ಜಿಲ್ಲಾ ಆರೋಗ್ಯಾಧಿಕಾರಿ ಜತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರಿಗೆ ಆಸ್ಪತ್ರೆಯಲ್ಲಿ ಆಗುತ್ತಿರುವ ಸಮಸ್ಯೆಗೆ ಡಿ ಗ್ರೂಪ್ ನೌಕರರು ಕೆಲಸ ಮಾಡುವಲ್ಲಿ ವಿಫಲರಾಗಿರುವುದೇ ಕಾರಣ ಎಂದು ತಿಳಿಸಿದರು.

ಅಲ್ಲದೆ, ಏಜೆನ್ಸಿಯವರಿಗೆ ಗುತ್ತಿಗೆ ನೀಡಿ ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಹಿನ್ನಡೆಯಾಗಿದೆ. ಇಲ್ಲಿನ ಆಸ್ಪತ್ರೆಯಲ್ಲಿ ಉತ್ತಮ ವಾತಾವರಣ ನಿರ್ಮಿಸುವಲ್ಲಿ ಹಿಂದುಳಿದಿದ್ದಾರೆ. ಆದ್ದರಿಂದ ಖಾಸಗಿ ಏಜೆನ್ಸಿಯ ಗುತ್ತಿಗೆ ಕ್ಯಾನ್ಸಲ್ ಮಾಡಬೇಕು. ಇವರಿಗೆ ಸರ್ಕಾರ ಸಂಬಳ ನೀಡುತ್ತಿದ್ದರೂ ಪ್ರಯೋಜನವಾಗುತ್ತಿಲ್ಲ. ನೆಪ ಮಾತ್ರಕ್ಕೆ ಸಿಬ್ಬಂದಿ ಇದ್ದಾರೆ. ಆಂಬುಲೆನ್ಸ್ ಚಾಲಕನಿಗೆ ಸಮವಸ್ತ್ರ ಕಡ್ಡಾಯವಾಗಿದ್ದರೂ ಉಡಾಫೆಯಿಂದ ಧರಿಸದೆ ಬರುವವರಿಗೆ ನೋಟಿಸ್ ನೀಡಿದ್ದರೂ ಬೆಲೆ ಕೊಡುತ್ತಿಲ್ಲ. ಇನ್ನು ಮುಂದೆ ಸಮವಸ್ತ್ರ ಧರಿಸದ ಸಿಬ್ಬಂದಿಗೆ ಹಾಜರಾತಿ ಕೊಡಬಾರದು ಮತ್ತು ಹಿಡಿತ ಸಾಧಿಸಲೆತ್ನಿಸುತ್ತಿರುವ ಸಿಬ್ಬಂದಿ ವಿರುದ್ಧ ಜಿಲ್ಲಾ ಸಮಿತಿಗೆ ಪತ್ರ ಬರೆದು ಕ್ರಮಕೈಗೊಳ್ಳಲು ವೈದ್ಯಾಧಿಕಾರಿ ಸೂಚಿಸಬೇಕು ಎಂದು ಹೇಳಿದರು.

ಶವ ಸಂಸ್ಕಾರಕ್ಕೆ ಅಡ್ಡಿಪಡಿಸುವ, ಸಮಯ ನಿಗದಿ ಪಡಿಸುವ ನೌಕರನ ವಿರುದ್ಧವೂ ತಾಲೂಕು ವೈದ್ಯಾಧಿಕಾರಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಮತ್ತು ಸ್ಕ್ಯಾನಿಂಗ್ ವೈದ್ಯರ ಕೊರತೆ ಇದ್ದು ತಕ್ಷಣ ಸಂಬಂಧಿಸಿದ ಅಧಿಕಾರಿಗಳ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು. ರಕ್ತ ಪರೀಕ್ಷೆಗೆ ಶುಲ್ಕ ನಿಗದಿ ಮಾಡಲು ಸೂಚಿಸುತ್ತೇನೆ. ಔಷದ ಕೊಠಡಿ ಸಂಜೆವರೆಗೂ ತೆರೆಯುವಂತೆ ಮಾಡಲಾಗುವುದು. ಇಲ್ಲಿನ ಎಲ್ಲ ಸಮಸ್ಯೆಗಳಿಗೂ ಶೀಘ್ರವೇ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲ ಸದಸ್ಯರ ಸಲಹೆಯಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯ ಚಂದ್ರಶೇಖರ್(ಪಾಪು) ಮಾತನಾಡಿ, ವೈದ್ಯಾಧಿಕಾರಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ಸ್ಪಂದಿಸುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಆದರೆ ಅವರು ಯಾರದೋ ಕಪಿಮುಷ್ಟಿಯಲ್ಲಿ ಹೆದರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ. ವೈದ್ಯಾಧಿಕಾರಿ ಅಂಥವರ ಹೆಸರೇಳಿದರೆ ಶಾಸಕರ ಸಮ್ಮುಖದಲ್ಲೇ ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ರೋಗಿಗಳು ಆಸ್ಪತ್ರೆಗೆ ಬಂದರೆ ಗುಣಮುಖರಾಗಿ ಹೋಗಬೇಕು, ಆದರೆ ಗುಣಮುಖರು ಬಂದರೆ ರೋಗಿಗಳಾಗಿ ಹೋಗುವ ವಾತಾವರಣವಿದೆ. ಶಾಸಕರು ಸಮಸ್ಯೆ ಆಲಿಸಿ ಬಗೆಹರಿಸುವ ಕೆಲಸ ಮಾಡಬೇಕು. ಆಂಬುಲೆನ್ಸ್ ಚಾಲಕರು ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಮತ್ತು ವಾಹನಕ್ಕೆ ಮಾತ್ರ ಲಭ್ಯವಿರಬೇಕು. ಆದರೆ ಅವರು ಖಾಸಗಿ ವ್ಯಕ್ತಿಗಳ ಕೆಲಸ ಮಾಡುತ್ತ ಎರಡೂ ಕಡೆ ಸಂಬಳ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಇದ್ದು ಇದನ್ನು ತಕ್ಷಣ ನಿಲ್ಲಿಸಬೇಕು ಎಂದರು.
ಸದಸ್ಯ ವೆಂಕಟೇಶ್ ಮಾತನಾಡಿ, ಇಲ್ಲಿನ ಅಸ್ಪತ್ರೆಯಲ್ಲಿ ಒಬ್ಬ ಗುತ್ತಿಗೆ ಸಿಬ್ಬಂದಿಯದ್ದೆ ಆಟ ನಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದ್ದು, ವೈದ್ಯರು ಮತ್ತು ಸಿಬ್ಬಂದಿ ಅವರೇಳಿದಂತೆ ನಡೆಸಿಕೊಳ್ಳುತ್ತಿದ್ದಾರೆ. ಕಳೆದ 17 ವರ್ಷಗಳಿಂದ ಇಲ್ಲಿಯೇ ಬೀಡು ಬಿಟ್ಟಿರುವ ಆಂಬುಲೆನ್ಸ್ ಚಾಲಕನನ್ನು ತಕ್ಷಣವೇ ಬೇರೆಡೆ ಕಳುಹಿಸಿದರೆ ಆಸ್ಪತ್ರೆಯಲ್ಲಿ ಎಲ್ಲವೂ ಸರಿಯಾಗುತ್ತದೆ. ಮತ್ತು ಆಂಬುಲೆನ್ಸ್ ಚಾಲಕರು ನೇರವಾಗಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಕೆಲಸ ಮಾಡುತ್ತಿದ್ದಾರೆ. ಹೀಗಾದರೆ ಬಡವರು ಏನು ಮಾಡಬೇಕು. ಸರಿಯಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು ವೈದ್ಯರು ತಿಳಿಸಬೇಕು. ಮತ್ತು ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್ ವಾಹನದೊಂದಿಗೆ ಸ್ಟಾಫ್ ನರ್ಸ್ ಒಬ್ಬರನ್ನು ಕಳುಹಿಸಿದರೆ ರೋಗಿಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಆಡಳಿತ ವೈದ್ಯಾಧಿಕಾರಿ ಡಾ.ಸುಧಾ ಮಾತನಾಡಿ, ಆಸ್ಪತ್ರೆಯಲ್ಲಿ ನಾಲ್ಕು ಜನ ವೈದ್ಯರ ಕೊರತೆ ಇದೆ. ಈ ಬಗ್ಗೆ ಮೇಲಧಿಕಾರಿಗಳಿಗೆ ತಿಳಿಸಿದ್ದೇವೆ. ಆಸ್ಪತ್ರೆಯಲ್ಲಿ ಎಕ್ಸರೇ ತೆಗೆಯಲಾಗುತ್ತಿದೆ. ಸ್ಕ್ಯಾನಿಂಗ್ ಇದ್ದರೂ ತಜ್ಞರಿಲ್ಲ. ಮತ್ತು ಎಲ್ಲ ಔಷಧ, ಮಾತ್ರೆಗಳು ನಮ್ಮಲ್ಲೇ ಬರೆದು ಕೊಡಲಾಗುತ್ತಿದೆ. ತುರ್ತು ಚಿಕಿತ್ಸೆಗಾದರೆ ಹಾಸನದ ಹಿಮ್ಸ್ ಆಸ್ಪತ್ರೆಗೆ ಕಳುಹಿಸುತ್ತೇವೆ. ಇಲ್ಲದಿದ್ದಲ್ಲಿ ಇಲ್ಲಿಯೇ ಚಿಕಿತ್ಸೆ ಕೊಡಲಾಗುವುದು ಎಂದರು.

ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ದೇವರಾಜ್, ಹರ್ಷ, ಕೋಳಿ ರಘು, ರೇಣುಕಯ್ಯ, ತಾಲೂಕು ಆರೋಗ್ಯಾಧಿಕಾರಿ ವಿಜಯ್, ಆಸ್ಪತ್ರೆ ಸಿಬ್ಬಂದಿ ಇದ್ದರು.

 

Share This Article

ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt

Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…

ಬಸ್ಸು ಅಥವಾ ಕಾರಿನಲ್ಲಿ ಪ್ರಯಾಣಿಸುವಾಗ ವಾಂತಿ ಬರೊದೇಕೆ ಗೊತ್ತೆ!; ತಡೆಗಟ್ಟೊದೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ | Vomit

Vomit : ಕೆಲವರಿಗೆ ಬಸ್​ ಮತ್ತು ಕಾರಿನಲ್ಲಿ ಪ್ರಯಾಣ ಮಾಬೇಕಾದರೆ ಸಲ್ಪ ದೂರು ಪ್ರಯಾಣಿಸಿದ ಬಳಿಕ…

ನಕಲಿ vs ಅಸಲಿ ಕಲ್ಲಂಗಡಿ ಹಣ್ಣು: ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…