ವೈದ್ಯಕೀಯ ತ್ಯಾಜ್ಯ ಸಮರ್ಪಕವಾಗಿ ವಿಲೇವಾರಿ ಮಾಡಿ

ಮಡಿಕೇರಿ: ಜಿಲ್ಲೆಯ ಪ್ರಾಥಮಿಕ, ಸಮುದಾಯ, ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಜೀವ ವೈದ್ಯಕೀಯ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸ್ಪಷ್ಟ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿನ ಜೀವ ವೈದ್ಯಕೀಯ ತ್ಯಾಜ್ಯವನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು. ಯಾವುದೇ ಕಾರಣಕ್ಕೂ ಆಸ್ಪತ್ರೆಯಲ್ಲಿ ತ್ಯಾಜ್ಯ ಇಟ್ಟುಕೊಳ್ಳಬಾರದು ಎಂದು ಸೂಚಿಸಿದರು.

ಉಪ ಪರಿಸರ ಅಧಿಕಾರಿ ಡಾ.ಎಂ.ಕೆ.ಸುಧಾ ಮಾತನಾಡಿ, ವೈದ್ಯಕೀಯ ತ್ಯಾಜ್ಯವನ್ನು ಪರಿಸರ ನಿಯಮದ ಪ್ರಕಾರ 48 ಗಂಟೆಯೊಳಗೆ ವಿಲೇವಾರಿ ಮಾಡಬೇಕಿದೆ. ಆದರೆ ವಾರದಲ್ಲಿ ಎರಡು ದಿನ ಮಾತ್ರ ವೈದ್ಯಕೀಯ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗುತ್ತಿದೆ. ಸಕಾಲದಲ್ಲಿ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಮಾಡದಿದ್ದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಆದ್ದರಿಂದ ಕಾಲ ಕಾಲಕ್ಕೆ ಆಸ್ಪತ್ರೆಯ ತ್ಯಾಜ್ಯ ವಿಲೇವಾರಿ ಮಾಡುವಂತಾಗಬೇಕು ಎಂದರು.
ಜೀವ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ತಿಳಿಸಿದರು

ಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಆನಂದ್ ಮಾತನಾಡಿ, ಜಿಲ್ಲೆಯಲ್ಲಿ 2018 ಜನವರಿಯಿಂದ ಡಿಸೆಂಬರ್ ಅಂತ್ಯದ 302 ಕ್ಷಯ ರೋಗಿಗಳು ದಾಖಲಾಗಿದ್ದು, ಇವರಲ್ಲಿ 255 ಜನ ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾ ಘಟಕದ ಅಧಿಕಾರಿ ಡಾ.ಶಿವಕುಮಾರ್, ಆರ್‌ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ವೈದ್ಯಕೀಯ ಕಾಲೇಜಿನ ಅಧೀಕ್ಷಕ ಡಾ.ಲೋಕೇಶ್, ವಿರಾಜಪೇಟೆ ತಾಲ್ಲೂಕು ವೈದ್ಯಾಧಿಕಾರಿ ಡಾ.ಯತಿರಾಜ್, ಡಾ.ಶ್ಯಾಮ್, ಡಾ.ಕೃಷ್ಣಾನಂದ, ಪೌರಾಯುಕ್ತ ಎಂ.ಎಲ್.ರಮೇಶ್ ಇತರರು ಇದ್ದರು.
:

Share This Article

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…

ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು

 ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…