More

    ಗಣರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ:ಡಿಸಿ ನಲಿನ್​ ಅತುಲ್​ ಸೂಚನೆ

    ಕೊಪ್ಪಳ: ಜಿಲ್ಲಾ ಕೇಂದ್ರದಲ್ಲಿ ಜ.26ರಂದು ಆಚರಿಸುವ ಗಣರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ನಲಿನ್​ ಅತುಲ್​ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

    ಬೆಳಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಧ್ವಜಾರೋಹಣ ಇರಲಿದೆ. ಬಳಿಕ ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಧ್ವಜಾರೋಹಣ ನೆರವೇರಿಸುವರು. ಎಲ್ಲ ಅಧಿಕಾರಿಗಳ ಹಾಜರಾತಿ ಕಡ್ಡಾಯ. ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಲು ಸಮಿತಿ ರಚಿಸಿದ್ದು, ಎಲ್ಲರೂ ಅವರವರ ಕೆಲಸ ಸರಿಯಾಗಿ ನಿಭಾಯಿಸಿ. ಜ.24ರಂದೇ ಕಾರ್ಯಕ್ರಮ ಪಟ್ಟಿ ಅಂತಿಮಗೊಳಿಸಿ. ಸನ್ಮಾನ, ಪ್ರಶಸ್ತಿ ವಿತರಣೆ ಮುಂತಾದ ಕಾರ್ಯಕ್ರಮಗಳನ್ನು ಕೊನೇ ಕ್ಷಣದಲ್ಲಿ ನಿರ್ಧರಿಸಬೇಡಿ ಎಂದರು.

    ಅಧಿಕಾರಿಗಳು ಬೇಜವಾಬ್ದಾರಿ ತೋರದೆ ನಿಮ್ಮ ಜವಾಬ್ದಾರಿ ನಿಭಾಯಿಸಿ. ಗೊಂದಲವಿದ್ದರೆ ಮೇಲಧಿಕಾರಿಗಳ ಗಮನಕ್ಕೆ ತನ್ನಿ.
    ಕ್ರೀಡಾಂಗಣ ಸ್ವಚ್ಛತೆ, ಕುಡಿವ ನೀರು, ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಸ್ಚಚ್ಛತೆ ಹಾಗೂ ವಿದ್ಯುತ್​ ದೀಪಗಳ ಅಲಂಕಾರ ಮಾಡಿ. ಶಾಲಾ ಮಕ್ಕಳು ಕ್ರೀಡಾಂಗಣಕ್ಕೆ ಆಗಮಿಸಿ, ಮರಳಿ ತೆರಳಲು ಸಾರಿಗೆ ಬಸ್​ ಸೌಲಭ್ಯ ಕಲ್ಪಿಸಿ. ಪೊಲೀಸರು ಬಂದೋಬಸ್ತ್​ ಒದಗಿಸುವಂತೆ ಸೂಚಿಸಿದರು.
    ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ ಮಾತನಾಡಿ, ಮಕ್ಕಳಿಗೆ ಬಿಸ್ಕತ್​, ನಿಂಬು ಶರಬತ್​ ನೀಡಿ. ಸೂಕ್ತ ನೆರಳಿನ ವ್ಯವಸ್ಥೆ ಮಾಡಿ. ಸಂವಿಧಾನ ಜಾಗೃತಿ ಜಾಥಾ ನಡೆಸಲು ಸಿದ್ಧತೆ ಮಾಡಿಕೊಳ್ಳಿ ಎಂದರು.

    ಎಡಿಸಿ ಸಾವಿತ್ರಿ ಕಡಿ ಮಾತನಾಡಿ, ಚುನಾಯಿತ ಪ್ರತಿನಿಧಿಗಳು, ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ. ವೇದಿಕೆ ಕಾರ್ಯಕ್ರಮದಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.

    ಎಸಿ ಕ್ಯಾ.ಮಹೇಶ ಮಾಲಗಿತ್ತಿ, ತಹಸೀಲ್ದಾರ್​ ವಿಠ್ಠಲ ಚೌಗಲಾ, ಹೆಚ್ಚುವರಿ ಎಸ್​ಪಿ ಹೇಮಂತ್​ ಕುಮಾರ್​, ಡಿಡಿಪಿಐ ಶ್ರಿಶೈಲ ಬಿರಾದಾರ, ಡಿಡಿಪಿಯು ಜಗದೀಶ್​ ಎಚ್​.ಎಸ್​., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜು ತಳವಾರ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮನ್ನವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts