25.5 C
Bangalore
Monday, December 16, 2019

ಬಡ ಕುಟುಂಬದ ಮನೆ ನಿರ್ಮಾಣಕ್ಕಿದ್ದ ಅಡ್ಡಿ ತೆರವು

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಪಾಂಡವಪುರ: ಸೂರು ಕಟ್ಟಿಕೊಳ್ಳಲು ಸರ್ಕಾರದಿಂದ ಅನುದಾನ ಸಿಗದೆ ಸಾಮೂಹಿಕ ಆತ್ಮಹತ್ಯೆಗೆ ನಿರ್ಧರಿಸಿದ್ದ ಬೇಬಿ ಗ್ರಾಮದ ಮಾಲಯ್ಯ ಕುಟುಂಬಕ್ಕೆ ಅನುದಾನ ಬಿಡುಗಡೆ ಮಾಡುವ ಭರವಸೆ ಸಿಕ್ಕಿದ್ದು, ಕುಟುಂಬ ಸದಸ್ಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

- Advertisement -

‘ವಿಜಯವಾಣಿ’ ದಿನಪತ್ರಿಕೆಯಲ್ಲಿ ಈ ಕುರಿತು ವರದಿ ಪ್ರಕಟವಾಗಿದ್ದ ಹಿನ್ನೆಲೆಯಲ್ಲಿ ಸೋಮವಾರ ವಸತಿ ನಿಗಮಗಳ ಸಹಾಯಕ ವ್ಯವಸ್ಥಾಪಕ ನಿರ್ದೇಶಕ ರವಿಕುಮಾರ್ ಗ್ರಾಮಕ್ಕೆ ಭೇಟಿ ನೀಡಿದರು. ಈ ವೇಳೆ ಮಾಲಯ್ಯ ಅವರ ಮನೆಯ ದುಸ್ಥಿತಿಯನ್ನು ಕಂಡು ಮರುಕ ವ್ಯಕ್ತಪಡಿಸಿದ ಅವರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ವಾರದೊಳಗೆ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದರು.

ಅನುದಾನ ನೀಡುವುದಾಗಿ ಅಧಿಕಾರಿಗಳೇ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಮಾಲಯ್ಯ ಇದ್ದ ಹರಕಲು ಮನೆಯನ್ನು ಕಿತ್ತುಹಾಕಿ, ಹೊಸ ಮನೆ ನಿರ್ಮಾಣಕ್ಕೆ ಸಾವಿರಾರು ರೂ. ವೆಚ್ಚ ಮಾಡಿ ಅಡಿಪಾಯ ಹಾಕಿದ್ದರು. ಆದರೆ, ತಾಂತ್ರಿಕ ಕಾರಣಗಳನ್ನು ಮುಂದೊಡ್ಡಿ ಅನುದಾನ ತಡೆ ಹಿಡಿಯಲಾಗಿತ್ತು. ಪರಿಣಾಮ ಒಂದೂವರೆ ವರ್ಷದಿಂದ ಈ ಕುಟುಂಬ ಟಾರ್ಪಾಲನ್ನೇ ಛಾವಣಿಯಾಗಿಸಿಕೊಂಡು, ಅದರ ಅಡಿಯಲ್ಲೇ ಜೀವನ ಸಾಗಿಸುತ್ತಿತ್ತು.

ಅನಾರೋಗ್ಯಪೀಡಿತ ಮಾಲಯ್ಯನ ಜತೆಗೆ ಪತ್ನಿ, ಬಾಣಂತಿ ಮಗಳು, ಪುತ್ರ, ಸೊಸೆ, ಇಬ್ಬರು ಮೊಮ್ಮಕ್ಕಳು ವಾಸವಿದ್ದು, ಮಳೆಗಾಲವಾದ್ದರಿಂದ ಹಲವು ದಿನಗಳ ಕಾಲ ನೆರೆಮನೆಯ ಸೂರಿನಡಿ ಆಶ್ರಯ ಪಡೆದಿದ್ದರು. ಮಾಲಯ್ಯ ಕುಟುಂಬ ಸೊಸೆಯ ದುಡಿಮೆ ಮೇಲೆ ಅವಲಂಬಿತವಾಗಿದ್ದು, ಈ ಎಲ್ಲದರ ಕುರಿತು ‘ವಿಜಯವಾಣಿ’ ಅ.8 ಹಾಗೂ 20 ರ ಸಂಚಿಕೆಗಳಲ್ಲಿ ವರದಿ ಪ್ರಕಟಿಸಿತ್ತು.

ಅಧಿಕಾರಿಗಳ ವಿರುದ್ಧ ಗರಂ: ಬೇಬಿ ಗ್ರಾಮಕ್ಕೆ ಭೇಟಿ ನೀಡಿದ ವಸತಿ ನಿಗಮಗಳ ಸಹಾಯಕ ವ್ಯವಸ್ಥಾಪಕ ನಿರ್ದೇಶಕ ರವಿಕುಮಾರ್, ಮಾಲಯ್ಯ ಅವರ ಮುರುಕಲು ಗೂಡಿನೊಳಗೆ ಹೋಗಿ ಪರಿಶೀಲನೆ ನಡೆಸಿದ ನಂತರ ಇಷ್ಟು ಕಷ್ಟದಲ್ಲಿರುವ ಇವರಿಗೆ ಏಕೆ ಅನುದಾನ ನೀಡಲಿಲ್ಲ ಎಂದು ಪಿಡಿಒ ತಮ್ಮೇಗೌಡ ಅವರನ್ನು ತರಾಟೆಗೆ ತೆಗೆದುಕೊಂಡರು. ಮಾನವೀಯತೆಯಡಿ ಕೆಲಸ ಮಾಡುವಂತೆ ತಾಕೀತು ಮಾಡಿದ ಅವರು, ಇನ್ನೂ ಎಷ್ಟು ಪ್ರಕರಣಗಳನ್ನು ಈ ರೀತಿ ಉಳಿಸಿಕೊಂಡಿದ್ದೀರಿ? ಬಡವರಿಗೆ ನ್ಯಾಯ ಕಲ್ಪಿಸಲು ಆಗುವುದಿಲ್ಲವೆ ಎಂದು ಕಿಡಿಕಾರಿದರು.

ಗ್ರಾಮಸ್ಥರು ಕೂಡ ನಿರ್ದೇಶಕರ ಸಮ್ಮುಖದಲ್ಲಿಯೇ ಪಿಡಿಒ ಅವರನ್ನು ತರಾಟೆಗೆ ತೆಗೆದುಕೊಂಡು, ಶ್ರೀಮಂತರಿಗಿಲ್ಲದ ಕಾನೂನುಗಳು ಬಡವರಿಗೆ ಮಾತ್ರ ಏಕೆಂದು ಪ್ರಶ್ನಿಸಿದರು.

ವಸತಿ ನಿರ್ಮಾಣಕ್ಕಾಗಿ ಬಡವರಿಗೆ ಅನುದಾನ ನೀಡುವುದು ನಮ್ಮ ಕರ್ತವ್ಯ. ಈ ಹಿಂದೆ ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ, ವೈಯಕ್ತಿಕ ಕಾರಣಗಳಿಂದ ಮನೆ ನಿರ್ಮಿಸಿಲ್ಲವೆಂದು ಅಧಿಕಾರಿಗಳು ಹೇಳಿದ್ದಾರೆ. ಈ ವಿಷಯದಲ್ಲಿ ಕೆಲ ಲೋಪವಾಗಿವೆ. ಇಂದೇ ಎಲ್ಲವನ್ನೂ ಸರಿಪಡಿಸಿ ವಾರದೊಳಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ರವಿಕುಮಾರ್ ಹೇಳಿದರು.

ಒಮ್ಮೆ ಅನುದಾನ ಬಿಡುಗಡೆ ಆಗಿ ಸರ್ಕಾರಕ್ಕೆ ವಾಪಸ್ ಹೋದರೂ ಕಂಪ್ಯೂಟರ್‌ನಲ್ಲಿ ಆತನ ಹೆಸರು ‘ಫಲಾನುಭವಿ’ ಎಂಬುದಾಗಿ ನಮೂದಾಗುತ್ತದೆ. ಆದ್ದರಿಂದ ಎರಡನೇ ಬಾರಿ ಅನುದಾನ ಸಿಗುವುದಿಲ್ಲ. ಈಗ ತಾಂತ್ರಿಕ ದೋಷ ಸರಿಪಡಿಸಿ ಅನುದಾನ ನೀಡಲಾಗುವುದು ಎಂದರು.
ತಾಪಂ ಇಒ ಮಹೇಶ್, ಸದಸ್ಯ ಅಲ್ಪಹಳ್ಳಿ ಗೋವಿಂದಯ್ಯ, ಗ್ರಾ.ಪಂ. ಸದಸ್ಯ ಸಿದ್ದಲಿಂಗದೇವರು, ಮುಖಂಡರಾದ ಗಿರೀಶ್, ನಾರಾಯಣ ಇತರರಿದ್ದರು.

ಪತ್ರಿಕೆಗೆ ಧನ್ಯವಾದ: ಮನೆ ನಿರ್ಮಾಣಕ್ಕೆ ಅನುದಾನ ನೀಡುವಂತೆ ಒಂದೂವರೆ ವರ್ಷದಿಂದ ಗೋಗರೆದಿದ್ದರೂ ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಆದರೆ, ವರದಿ ಪ್ರಕಟಿಸುವ ಮೂಲಕ ಸಮಸ್ಯೆಯ ಮೇಲೆ ಬೆಳಕು ಚೆಲ್ಲಿ, ಸರ್ಕಾರದಿಂದ ಅನುದಾನ ಕೊಡಿಸಲು ನೆರವಾದ ‘ವಿಜಯವಾಣಿ’ ಪತ್ರಿಕೆಗೆ ಮಾಲಯ್ಯ ಹಾಗೂ ಕುಟುಂಬದ ಸದಸ್ಯರು ಧನ್ಯವಾದ ಅರ್ಪಿಸಿದರು.

 

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...