

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರ ಮೇಲೆ ನಿರಂತರ ಕೇಸು ದಾಖಲಿಸುವ ಮೂಲಕ ಕರ್ನಾಟಕದ ಕಾಂಗ್ರೆಸ್ ಸರ್ಕಾರ
ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿದೆ ಎಂದು ಬಿಜೆಪಿ ದ.ಕ.ಜಿಲ್ಲಾದ್ಯಕ್ಷ ಸತೀಶ್ ಕುಂಪಲ ಟೀಕಿಸಿದ್ದಾರೆ. ಹಿಂದುಗಳ ಭಾವನೆಗಳಿಗೆ ನೋವುಂಟು ಮಾಡಿರುವ ರಾಹುಲ್ ಗಾಂಧಿ ವಿರುದ್ದ ಪ್ರತಿಭಟನೆ ಸಂದರ್ಭ ಹೇಳಿಕೆ ನಿಡಿದ ಶಾಸಕ ಡಾ.ವೈ. ಭರತ್ ಶೆಟ್ಟಿ ಅವರ ಮೇಲೆ ಕೇಸು ದಾಖಲಿಸಿರುವುದು ನಾಚಿಕೆಗೇಡು. ಕಾಂಗ್ರೆಸಿಗರು ವಿಧಾನನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ದೇಶ ದ್ರೋಹಿಗಳಿಗೆ ರಕ್ಷಣೆ ನೀಡಿದ್ದಾರೆ. ಮಂಗಳೂರಿನಲ್ಲಿ ರಸ್ತೆ ಮಧ್ಯೆ ನಮಾಜ್ ಸಲ್ಲಿಸಿದವರ ಮೇಲೆೆ ಪೊಲೀಸರು. ಹಾಕಿದ ಕೇಸನ್ನು ಹಿಂದಕ್ಕೆ ಪಡೆಯಲು ಸೂಚಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ, ವಿಧಾನ ಪರಿಷತ್ ಚುನಾವಣೆಯಲ್ಲಿ ಸೋತು ಕಂಗೆಟ್ಟಿರುವ ಕಾಂಗ್ರೆಸ್ ದ್ವೇಷದ ರಾಜಕಾರಣ ಮೂಲಕ ಜಿಲ್ಲೆಯಲ್ಲಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.