ಗಂಗೊಳ್ಳಿ: ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಪ್ರತಿವರ್ಷ ನೂರಾರು ಅರ್ಜಿಗಳು ಬರುತ್ತಿದ್ದು, ಕೆಲವೇ ಕೆಲವು ಮಂದಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಸರ್ಕಾರ ವಿವಿಧ ಇಲಾಖೆಗಳ ಮೂಲಕ ನೀಡುವ ಸವಲತ್ತುಗಳನ್ನು ಹೆಚ್ಚಿನ ಫಲಾನುಭವಿಗಳು ಪಡೆದುಕೊಳ್ಳುವಂತಾಗಬೇಕು. ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸುವುದಾಗಿ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಕುಂದಾಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ಶುಕ್ರವಾರ ವಿತರಿಸಿ ಮಾತನಾಡಿದರು.
ಕುಂದಾಪುರ ಪ್ರಭಾರ ತಹಸೀಲ್ದಾರ್ ಮಲ್ಲಿಕಾರ್ಜುನ್, ಬೈಂದೂರು ತಹಸೀಲ್ದಾರ್ ಭೀಮ್‌ಸೇನ್ ಕುಲಕರ್ಣಿ, ಕುಂದಾಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ರವಿ ಕುಮಾರ್, ಕಾರ್ಮಿಕ ನಿರೀಕ್ಷಕ ವಿಜಯೇಂದ್ರ, ದೇವರಾಜು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ ಮೊದಲಾದವರು ಉಪಸ್ಥಿತರಿದ್ದರು.
ದೇವರಾಜು ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ಮೂಲಕ 36 ಮಹಿಳೆಯರಿಗೆ ಹೊಲಿಗೆ ಯಂತ್ರ ಮತ್ತು ಕಾರ್ಮಿಕ ಇಲಾಖೆಯಿಂದ ವೆಲ್ಡಿಂಗ್ ಕೆಲಸ ಮಾಡುವ 10 ಜನರಿಗೆ ಕಿಟ್ ವಿತರಿಸಲಾಯಿತು.