
ವಿಜಯಪುರ: ಬಗರ್ ಹುಕುಂ ಸಾಗುವಳಿದಾರರಿಗೆ ಸರ್ಕಾರ ಕೂಡಲೇ ಹಕ್ಕುಪತ್ರ ವಿತರಿಸಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಯು. ಬಸವರಾಜ ಹೇಳಿದರು.
ನಗರದ ಕೇಂದ್ರ ಬಸ್ ನಿಲ್ದಾಣ ಬಳಿಯ ಜಿಲ್ಲಾ ಸಹಕಾರಿ ಸಂದ ಸಭಾಂಗಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕರ್ನಾಟಕ ಪ್ರಾಂತ ರೈತ ಸಂ ಬಗರ್ ಹಕುಂ ಸಾಗುವಳಿದಾರರ ಜಿಲ್ಲಾ ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಧರಣಿ ಸತ್ಯಾಗ್ರಹಕ್ಕೆ ಅವಕಾಶ ನೀಡದೇ ಕೂಡಲೇ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಬೇಕೆಂದು ಆಗ್ರಹಿಸಿದರು.
ಅರಣ್ಯ ಭೂಮಿ ಸಾಗುನಿರತ ದಶ ಲಾಂತರ ಬಡವರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸಿ ಬಂಡವಾಳಿಗರಿಗೆ ದಾನ ಕೊಡಲಾಗುತ್ತಿದೆ. ಬಗರ್ ಹುಕುಂ ಸಾಗುವಳಿದಾರಿಗೆ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರು ಅಕ್ರಮ ಭೂಮಿ ಸಕ್ರಮಗೊಳಿಸಿ ಹಕ್ಕು ಪತ್ರ ನೀಡಲು ಕಾಳಜಿ ವಹಿಸಬೇಕು.
ಜಿಲ್ಲೆ, ತಾಲೂಕು ಮತ್ತು ಗ್ರಾಮಗಳಲ್ಲಿ ವಾಸಿಸುವ ಬಡ ಕುಟುಂಬದವರಿಗೆ ನಿವೇಶನ ನೀಡಿ ಹಕ್ಕುಪತ್ರ ವಿತರಿಸಬೇಕು. ಇಲ್ಲದಿದ್ದರೆ ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಂಬರುವ ಜು. 15 ರಂದು ಪ್ರತಿಭಟನೆ ಜತೆಗೆ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮುಖಂಡರಾದ ಅಣ್ಣಾರಾಯ ಇಳಿಗೇರ, ಭೀಮರಾಯ ಪೂಜಾರಿ, ಸುರೇಶ.ಜಿ.ಬಿ., ಲಕ್ಷ$್ಮಣ ಹಂದ್ರಾಳ, ಚಿದಾನಂದ ಬೆಳ್ಳಂದವರ, ರಮೇಶ ಸಾಸಬಾಳ ಮತ್ತಿತರರಿದ್ದರು.