

ಗಂಗೊಳ್ಳಿ: ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ ಮತ್ತು ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ವತಿಯಿಂದ ಗಂಗೊಳ್ಳಿಯ ಎಂಟು ಅಂಗನವಾಡಿ ಕೇಂದ್ರದ ಮಕ್ಕಳು ಹಾಗೂ ಎಸ್.ವಿ.ಹಿರಿಯ ಪ್ರಾಥಮಿಕ ಶಾಲೆಯ ಒಟ್ಟು 50 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗಂಗೊಳ್ಳಿ ಮೇಲ್‌ಗಂಗೊಳ್ಳಿ ಡಾ.ಅಂಬೇಡ್ಕರ್ ಸಭಾಭವನದಲ್ಲಿ ಗುರುವಾರ ನಡೆಯಿತು.
ಗಂಗೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಖಾರ್ವಿ, ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ ಟಿ.ಎಲ್., ಅಂಗನವಾಡಿ ಮೇಲ್ವಿಚಾರಕಿ ರೇಖಾ ಕೆ., ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಗೋಪಾಲ ಪೂಜಾರಿ, ಜಿ.ವಿ.ಆರ್.ಲಕ್ಷ್ಮಣ ಪೂಜಾರಿ, ಸವಿತಾ ಖಾರ್ವಿ, ಜ್ಯೋತಿ ಆನಂದ, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ಅಧ್ಯಕ್ಷೆ ಸುಮಿತ್ರಾ ಜಿ., ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಜಿಲ್ಲಾಧ್ಯಕ್ಷೆ ಫಿಲೋಮಿನಾ ಫರ್ನಾಂಡಿಸ್, ಸರ್ಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆ ಮುಖ್ಯಶಿಕ್ಷಕ ಗುರುರಾಜ್ ಆಚಾರ್ಯ, ಸಹಶಿಕ್ಷಕ ಯೋಗೀಶ್, ಈಶ್ವರ ಜಿ., ಅಂಗನವಾಡಿ ಕಾರ್ಯಕರ್ತೆಯರು, ಪಾಲಕರು ಮತ್ತಿತರರು ಉಪಸ್ಥಿತರಿದ್ದರು.