

ಬದಿಯಡ್ಕ: ಕಿಳಿಂಗಾರು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ಪ್ರಿ ಪ್ರೈಮರಿ ಹಾಗೂ ಶಾಲಾ ಪ್ರವೇಶೋತ್ಸವ ಸೋಮವಾರ ನಡೆಯಿತು. ಶಾಲಾ ವ್ಯವಸ್ಥಾಪಕ, ಕೊಡುಗೈದಾನಿ ಸಾಯಿರಾಂ ಕೆ.ಎನ್ ಕೃಷ್ಣ ಭಟ್ ಉದ್ಘಾಟಿಸಿದರು. ಹೊಸದಾಗಿ ದಾಖಲಾತಿಗೊಂಡ ವಿದ್ಯಾರ್ಥಿಗಳನ್ನು ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು. ಹಳೇ ವಿದ್ಯಾರ್ಥಿ ಶ್ರೀನಿಧಿ ನಿಡುಗಳ ಅವರು ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಿಸಿದರು. ಪಿಟಿಎ ಅಧ್ಯಕ್ಷ ವಿಷ್ಣು ಪ್ರಕಾಶ್ ಪೆರ್ವ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್, ಶಿವಪ್ರಸಾದ್ ಹೊಸಮನೆ, ದಿವ್ಯಲಕ್ಷ್ಮೀ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶ್ರೀವಿದ್ಯಾ ಎ. ಸ್ವಾಗತಿಸಿದರು. ಸಹನಾ ಎಂ.ವಂದಿಸಿದರು.