ಎಸ್‌ಸಿ, ಎಸ್‌ಟಿ ಕುಟುಂಬಗಳಿಗೆ ಸವಲತ್ತು ವಿತರಣೆ

pdb (3)
Published on

ಪಡುಬಿದ್ರಿ: ಪಲಿವಾರು ಗ್ರಾಮ ಪಂಚಾಯಿತಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಸೋಮವಾರ ನಡೆದ ಗ್ರಾಪಂ ಶೇ.25ರ ನಿಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಮುದರಂಗಡಿ ಮೆಸ್ಕಾಂ ಶಾಖಾಧಿಕಾರಿ ಮುಕ್ತುಮ್ ಹುಸೇನ್ ಹಾಗೂ ಪದವಿಪೂರ್ವ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಿಸಿದ ಪಲಿವಾರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಗ್ರೆಟ್ಟಾ ಮೊರಾಸ್, ಕ್ಷಯಮುಕ್ತ ಗ್ರಾಮವಾಗಲು ಶ್ರಮಿಸಿದ ಸಮುದಾಯ ಆರೋಗ್ಯ ಅಧಿಕಾರಿಗಳಾದ ರೀನಾ ಹಾಗೂ ಚೈತ್ರಾ ಅವರನ್ನು ಸನ್ಮಾನಿಸಲಾಯಿತು. ಆಶಾ ಕಾರ್ಯಕರ್ತರನ್ನು ಗೌರವಿಸಲಾಯಿತು.

ಗ್ರಾ.ಪಂ. ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷ ರಾಯೇಶ್ವರ ಪೈ, ಪ್ರಭಾರ ಪಿಡಿಒ ಮಂಜುನಾಥ ಪಿ.ಶೆಟ್ಟಿ, ಆರೋಗ್ಯಾಧಿಕಾರಿ ಪೂರ್ಣಿವಾ ಹಾಗೂ ಗ್ರಾ.ಪಂ. ಸದಸ್ಯರು ಮತ್ತು ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net