More

    ರೈತರಿಗೆ ತೆಂಗಿನ ಸಸಿ ವಿತರಣೆ

    ಮದ್ದೂರು: ತಾಲೂಕಿನ ರೈತರಿಗೆ ತೋಟಗಾರಿಕೆ ಇಲಾಖೆಯಿಂದ ಉಚಿತವಾಗಿ ತೆಂಗಿನ ಸಸಿ ವಿತರಣಾ ಕಾರ್ಯಕ್ರಮಕ್ಕೆ ಮಂಗಳವಾರ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು.

    ತೋಟಗಾರಿಕಾ ಬೆಳೆಗಳನ್ನು ಬೆಳೆಯುವುದರಿಂದ ರೈತರಿಗೆ ಹೆಚ್ಚಿನ ಆದಾಯ ಬರುತ್ತದೆ ಹಾಗೂ ತೆಂಗನ್ನು ನಮ್ಮ ಹಿರಿಯರು ಅದರ ಉಪಯುಕ್ತ ಹಿನ್ನೆಲೆಯಲ್ಲಿ ಅದನ್ನು ಕಲ್ಪವೃಕ್ಷ ಎಂದೂ ಕರೆಯುತ್ತಾರೆ ಎಂದು ಅವರು ಹೇಳಿದರು.

    ಸುಮಾರು 10 ಸಾವಿರ ತೆಂಗಿನ ಸಸಿಗಳನ್ನು ತಾಲೂಕಿನ ರೈತರಿಗೆ ವಿತರಣೆ ಮಾಡಲು ಇಲಾಖೆ ಗುರಿ ಇಟ್ಟುಕೊಂಡಿದೆ. ಮುಂದಿನ ದಿನಗಳಲ್ಲಿ ಬೇಡಿಕೆ ನೋಡಿಕೊಂಡು ಮತ್ತಷ್ಟು ಹೆಚ್ಚು ಸಸಿಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

    ತಾಲೂಕಿನ ರೈತರು ತೆಂಗಿನ ಸಸಿಗಳನ್ನು ಉತ್ತಮ ರೀತಿಯಲ್ಲಿ ಬೆಳೆಸುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು. ಇಲಾಖೆಯ ಸಿಗುವ ಎಲ್ಲ ರೀತಿಯ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

    ತೆಂಗಿನ ಸಸಿಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ತೋಟಗಾರಿಕಾ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.

    ಉತ್ಕೃಷ್ಟ ತೋಟಗಾರಿಕಾ ಹಾಗೂ ನಿಖರ ಬೇಸಾಯ ತರಬೇತಿ ಕೇಂದ್ರದ ಉಪನಿರ್ದೇಶಕ ರಾಜು, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಎಂ.ರೇಖಾ, ಗ್ರಾ.ಪಂ. ಅಧ್ಯಕ್ಷ ತಿಮ್ಮೇಗೌಡ, ಮುಖಂಡರಾದ ರಾಕೇಶ್, ಹರೀಶ್, ಶಿವು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts