

ಬಂಟ್ವಾಳ: ಕೇಂದ್ರ ಸರ್ಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಆಶ್ರಯದಲ್ಲಿ ಕ್ಷಯ ರೋಗಿಗಳಿಗೆ ಆಹಾರ, ದವಸಧಾನ್ಯ ವಿತರಣಾ ಕಾರ್ಯಕ್ರಮ ನಡೆಯಿತು.
ಸಂಚಯಗಿರಿ ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ಕಾರ್ಯದರ್ಶಿ ಡಾ.ಆಶಾಲತಾ ಸುವರ್ಣ, ದ.ಕ. ಜಿಲ್ಲಾ ಕೃಷಿ ಅಭಿವೃದ್ಧಿ ಸಹಕಾರ ಸಂದ ಅಧ್ಯಕ್ಷ ರವೀಂದ್ರ ಕಂಬಳಿ ಮಾತನಾಡಿದರು.
ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯ ಡಾ.ಚೇತನ್ ಆರೋಗ್ಯ ಮಾಹಿತಿ ನೀಡಿದರು. ಪುದು ಗ್ರಾ.ಪಂ. ಅಧ್ಯೆ ರಶೀದಾ ಬಾನು, ಪ್ರಮುಖರಾದ ಪದ್ಮನಾಭ ಶೆಟ್ಟಿ ಪುಂಚಮೆ, ಕೃಷ್ಣ ತುಪ್ಪೆಕಲ್ಲು, ನಾರಾಯಣ ಬಡ್ಡೂರು, ಪ್ರಶಾಂತ್ ತುಂಬೆ, ವಿಕ್ರಂ ರ್ಬಕೆ ಮೊದಲಾದವರು ಉಪಸ್ಥಿತರಿದ್ದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಸ್ವಾಗತಿಸಿ, ವಂದಿಸಿದರು.