ಎಂಆರ್‌ಪಿಎಲ್‌ನಿಂದ ಸಿರಿಧಾನ್ಯ ವಿತರಣೆ

Kin_MRPL
Published on

ಸುರತ್ಕಲ್: ಎಂ.ಆರ್.ಪಿ.ಎಲ್. ಸಂಸ್ಥೆ ಸಿ.ಎಸ್.ಆರ್. ಅನುದಾನದ ಮೂಲಕ ನಿರಂತರ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದ್ದು, ಮಾದರಿ ಸಂಸ್ಥೆಯಾಗಿ ಮೂಡಿಬಂದಿದೆ ಎಂದು ಎಂ.ಆರ್.ಪಿ.ಎಲ್ ಸಿ.ಎಸ್.ಆರ್. ವಿಭಾಗದ ಜನರಲ್ ಮ್ಯಾನೇಜರ್ ಪ್ರಶಾಂತ್ ಬಾಳಿಗ ಹೇಳಿದರು.

ಎಂಆರ್‌ಪಿಎಲ್ ವತಿಯಿಂದ ಎಂಡೋಸಲ್ಫಾನ್, ಎಚ್.ಐ.ವಿ., ರಕ್ತ ಬಲಹೀನತೆ, ಕ್ಷಯದಿಂದ ಬಳಲುವವರಿಗೆ ವೃದ್ಧಾಶ್ರಮ, ಮತ್ತಿತರ ಕಡೆಗಳಿಗೆ 20 ಲಕ್ಷ ರೂ. ಬೆಲೆಬಾಳುವ ಪೌಷ್ಟಿಕಾಂಶಯುಕ್ತ ಸಿರಿಧಾನ್ಯ ವಿತರಿಸಿ ಮಾತನಾಡಿದರು.

ಎಂ.ಆರ್.ಪಿ.ಎಲ್. ಈ ಹಿಂದೆಯೂ ಎಂಡೋಸಲ್ಫಾನ್ ಪೀಡಿತರಾಗಿದ್ದು, ಮಲಗಿದಲ್ಲಿಯೇ ಇದ್ದ ಕುಟುಂಬಗಳಿಗೆ ದಿನ ಬಳಕೆಯ ವಸ್ತುಗಳನ್ನು ನೀಡಿದ್ದು, ವೃದ್ಧಾಶ್ರಮ ಮತ್ತು ಆಸ್ಪತ್ರೆಗಳಿಗೆ ಆ್ಯಂಬುಲೆನ್ಸ್ ವಾಹನ ನೀಡಿ ಸಹಕಾರ ನೀಡಿದೆ. ಇದೀಗ ಅನಾರೋಗ್ಯದಿಂದ ಬಳಲುವ 1,500 ಲಾನುಭವಿಗಳಿಗೆ ಸಿರಿಧಾನ್ಯ ನೀಡಿ ಸಹಕಾರ ನೀಡಲಾಗಿದೆ. ಲಾನುಭವಿಗಳು ಇದರಿಂದ ತಮ್ಮ ಆರೋಗ್ಯ ವೃದ್ಧಿಸಬಹುದಾಗಿದೆ. ಒಟ್ಟು 20 ಲಕ್ಷ ರೂ. ಬೆಲೆಬಾಳುವ 1,800 ಕಿಲೋ ಸಿರಿಧಾನ್ಯ ವಿತರಿಸಲಾಗಿದ್ದು, ಹೆಚ್ಚಿನ ಕಡೆಗಳಿಗೆ ತೆರಳಿ ನೇರವಾಗಿ ಲಾನುಭವಿಗಳಿಗೆ ನೀಡಲಾಗಿದೆ ಎಂದರು.

ಎಂ.ಆರ್.ಪಿ.ಎಲ್. ಅಧಿಕಾರಿ ಸ್ಟೀವನ್ ಪಿಂಟೋ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net