More

    ಹಣ ಹಂಚಿಕೆ, ದೂರು-ಪ್ರತಿದೂರು ದಾಖಲು

    ಬೆಳಗಾವಿ: ಗೋಕಾಕ ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ಹಣ ಹಂಚಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು, ಪ್ರತಿ ದೂರು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.
     ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಲಾಗಿತ್ತು. ದೂರುದಾರರ ಎದುರೇ ಪರಿಶೀಲನೆ ಮಾಡಿದ ಸಮಯದಲ್ಲಿ ಹಣ ಸಿಕ್ಕಿರಲಿಲ್ಲ. ಬಳಿಕ ಮನೆಯೊಂದರಲ್ಲಿ ಹಣ ಇಡಲಾಗಿದೆ ಎಂಬ ಮಾಹಿತಿ ಬಂತು. ಅಲ್ಲಿ 76 ಸಾವಿರ ರೂ. ಮತ್ತೊಂದು ಕಡೆ 1 ಲಕ್ಷ ರೂ. ಸೇರಿ ಒಟ್ಟು 1.76 ಲಕ್ಷ ರೂ.ಪತ್ತೆಯಾಗಿದೆ. ಈ ಕುರಿತು ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಮಾಹಿತಿ ನೀಡಿದರು.
     ಮನೆ, ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದ ಸಮಯದಲ್ಲಿ ಹಲ್ಲೆ ನಡೆಸಿ ಮೈ ಮೇಲಿನ ಬಂಗಾರದ ಆಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ ಎಂದು ಕಾಂಗ್ರೆಸ್‌ನವರು ಬಿಜೆಪಿಯವರ ವಿರುದ್ಧ ದೂರು ನೀಡಿದ್ದಾರೆ. ಹಣ ಹಂಚಿಕೆ ಮತ್ತು ಜಾತಿನಿಂದನೆ ಮಾಡಿದ್ದಾರೆ ಎಂದು ಬಿಜೆಪಿಯರು ಎರಡು ಪ್ರತ್ಯೇಕ ಪ್ರತಿದೂರು ದಾಖಲಿಸಿದ್ದಾರೆ. ಚುನಾವಣಾ ಆಯೋಗದ ನಿಯಮದಂತೆ ಅಭ್ಯರ್ಥಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದರು.
     ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾತನಾಡಿ, ನಗರದ ಶಹಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣ ಕುರಿತು ಶನಿವಾರ ಸಂಜೆ ಬಿಜೆಪಿಯ ಪ್ರವೀಣ, ಗಿರೀಶ, ನಿತಿನ್, ಅನಿಲ, ಜಯಂತ ಸೇರಿ ಒಟ್ಟು ಐವರ ವಿರುದ್ಧ ರಾದೇಶ ಎಂಬುವರು ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ. ಮೊದಲಿಗೆ ಕಾಂಗ್ರೆಸ್‌ನವರು ಹಣ ಹಂಚುತ್ತಿದ್ದಾರೆ ಎಂದು ಬಿಜೆಪಿಯವರು ಮಾಹಿತಿ ನೀಡಿದರು. ಅದರಂತೆ ಪರಿಶೀಲನೆ ನಡೆಸುತ್ತಿದ್ದೇವೆ. ಬಿಜೆಪಿ ಅವರು ಈವರೆಗೆ ಯಾವುದೇ ಸಾಕ್ಷ್ಯಗಳನ್ನು ಮತ್ತು ದೂರು ದಾಖಲಿಸಿಲ್ಲ. ಅಂಗಡಿ ಸೇರಿ ಇನ್ನಿತರ ಕಡೆಗಳಲ್ಲಿರುವ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದ್ದು, ಸಾಕ್ಷ್ಯಗಳು ಲಭ್ಯವಾದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts