More

    ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ

    ಕೊಳ್ಳೇಗಾಲ: ರಾಜ್ಯ ಸರ್ಕಾರ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡಲು ಉಚಿತ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.

    ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕಾರ್ಮಿಕ ಇಲಾಖೆ ಆಯೋಜಿಸಿದ್ದ ನೋಂದಾಯಿತ ಅರ್ಹ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಹಿಂದೆ ಟ್ಯಾಬ್ ನೀಡಲಾಗುತ್ತಿತ್ತು. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಲ್ಯಾಪ್‌ಟಾಪ್ ನೀಡುತ್ತಿದೆ. ಕೊಳ್ಳೇಗಾಲದ 40 ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿದೆ. 50 ಸಾವಿರ ರೂ. ಬೆಲೆ ಬಾಳುವ ಲ್ಯಾಪ್‌ಟಾಪ್‌ನ ಸದುಪಯೋಗ ಪಡೆದುಕೊಂಡು ಉನ್ನತ ಶಿಕ್ಷಣ ಪಡೆಯುವ ಮೂಲಕ ಸಾಧನೆ ಮಾಡಬೇಕೆಂದು ಸಲಹೆ ನೀಡಿದರು.

    ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸನ್ನಿಹಿತವಾಗುತ್ತಿದೆ. ಮಕ್ಕಳು ಚೆನ್ನಾಗಿ ಓದಿಕೊಳ್ಳಬೇಕು. ಲ್ಯಾಪ್‌ಟ್ಯಾಪ್ ವಿತರಣೆ ಬಡ ವರ್ಗಕ್ಕೆ ಸೇರುವ ಕಟ್ಟಡ ಕಾರ್ಮಿಕ ಮಕ್ಕಳಿಗೆ ಅನುಕೂಲವಾಗಲಿದೆ ಎಂದರು.

    ಪರೀಕ್ಷೆ ಎಂಬುದು ಹಬ್ಬವಾಗಲಿ: ಜಿಲ್ಲಾ ಕಾರ್ಮಿಕ ಅಧಿಕಾರಿ ಸವಿತಾ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ಆತಂಕ ಬಿಡಬೇಕು. ಪರೀಕ್ಷೆಯನ್ನು ಹಬ್ಬದಂತೆ ಆಚರಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸಾಧನೆ ಮಾಡಬೇಕು ಎಂದರು.

    ತಹಸೀಲ್ದಾರ್ ಮಂಜುಳಾ, ತಾಲೂಕು ಪಂಚಾಯಿತಿ ಇಒ ಶ್ರೀನಿವಾಸ್, ನಿರೀಕ್ಷಕ ಪ್ರಸಾದ್ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts