ಸರ್ಕಾರ ಜಾರಿಗೊಳಿಸುವ ಯೋಜನೆ ಸಮರ್ಪಕ ಬಳಕೆ : ಶಾಸಕಿ ಭಾಗೀರಥಿ ಮುರುಳ್ಯ ಕರೆ

New Project (6)
Published on

ಕಡಬ: ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಪಡೆಯುವ ಫಲಾನುಭವಿಗಳು ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡಾಗ ಯೋಜನೆಯ ಮಹತ್ವ ಸಾಕಾರಗೊಳ್ಳುತ್ತದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ದಕ್ಷಿಣ ಕನ್ನಡ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ, ಕೈೊಲ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಕಡಬ ಪಶು ಆಸ್ಪತ್ರೆ ಆಶ್ರಯದಲ್ಲಿ ಕೈೊಲ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ವಠಾರದಲ್ಲಿ 2024-25ನೇ ಸಾಲಿನ ಅಮೃತ ಸಿರಿ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಮಲೆನಾಡು ಗಿಡ್ಡ ತಳಿಯ ಹೆಣ್ಣು ಕರು ಮಂಗಳವಾರ ವಿತರಿಸಿ ಮಾತನಾಡಿದರು.

ಕೈೊಲ ಗ್ರಾ.ಪಂ. ಸದಸ್ಯ ಹರ್ಷಿತ್ ಕುಮಾರ್, ಆಲಂಕಾರು ಸಿ.ಎ. ಬ್ಯಾಂಕ್ ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಧರ್ಮಪಾಲ ರಾವ್ ಕಜೆ, ಬಿಜೆಪಿ ಮುಖಂಡ ಲಕ್ಷ್ಮೀನಾರಾಯಣ ರಾವ್ ಆತೂರು ಉಪಸ್ಥಿತರಿದ್ದರು. 11 ಫಲಾನುಭವಿಗಳಿಗೆ ಕರು ವಿತರಿಸಲಾಯಿತು. ಪಶುಪಾಲನೆ ಇಲಾಖಾ ಕಡಬ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿ ಡಾ.ಅಜಿತ್ ಎಂ.ಸಿ. ಯೋಜನೆಯ ಮಾಹಿತಿ ನೀಡಿದರು. ಕೈೊಲ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ ಉಪನಿರ್ದೇಶಕ ಡಾ.ಪ್ರಸನ್ನ ಕುಮಾರ್ ಹೆಬ್ಬಾರ್ ಸ್ವಾಗತಿಸಿ ನಿರೂಪಿಸಿದರು. ಸುಬ್ರಹ್ಮಣ್ಯದ ಮುಖ್ಯ ಪಶುವೈದ್ಯಾಧಿಕಾರಿ ಡಾ.ಮಲ್ಲಿಕಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net