ಪ.ಜಾತಿ-ಪಂಗಡದ ವಿದ್ಯಾರ್ಥಿಗಳಿಗೆ ನೋಟ್ಸ್ ಪುಸ್ತಕ ವಿತರಣೆ

gan
Published on

ಗಂಗೊಳ್ಳಿ: ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ವತಿಯಿಂದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೋಟ್ಸ್ ಪುಸ್ತಕ ವಿತರಣೆ ಕಾರ್ಯಕ್ರಮ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆನರಾ ಬ್ಯಾಂಕಿನ ನಿವೃತ್ತ ಉದ್ಯೋಗಿ ಪ್ರಮೋದ ಗಾಣಿಗ ಮಕ್ಕಳಿಗೆ ನೋಟ್ಸ್ ಪುಸ್ತಕಗಳನ್ನು ವಿತರಿಸಿದರು. ನಿವೃತ್ತ ಮುಖ್ಯಶಿಕ್ಷಕ ಜಿ.ವಿಶ್ವನಾಥ ಭಟ್, ಶಿಕ್ಷಕರಾದ ಲಕ್ಷ್ಮೀ ಖಾರ್ವಿ, ರೇಖಾ ಖಾರ್ವಿ, ರೇಣುಕಾ ನಾಯಕ್, ಭೂದೇವಿ, ಮಾಲಾಶ್ರೀ ಖಾರ್ವಿ, ಮಹಾಬಲ ಆಚಾರ್ಯ, ಅಕ್ಷತಾ, ಮಮತಾ ಖಾರ್ವಿ, ದೇವು, ಜಿ.ಈಶ್ವರ ಉಪಸ್ಥಿತರಿದ್ದರು. ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಅಧ್ಯಕ್ಷೆ ಸುಮಿತ್ರಾ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net