

ಮೂಡುಬಿದಿರೆ: ಸರ್ಕಾರಿ ಶಾಲೆ ಸಮಾಜ ಆಸ್ತಿ. ಪ್ರಾಥಮಿಕ ಶಿಕ್ಷಣ, ಆರೋಗ್ಯಕ್ಕೆ ಸರ್ಕಾರ ಖಾಸಗಿಯವರಿಗಿಂತಲೂ ಉತ್ತಮ ಗುಣಮಟ್ಟದ ಸೇವೆ ನೀಡುತ್ತಿದೆ. ಸರ್ಕಾರಿ ಶಾಲೆಯ ಬಗ್ಗೆ ಕೀಳರಿಮೆ ಸಲ್ಲದು. ರೋಟರಿಯಂತಹ ಸಂಸ್ಥೆಗಳು ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ತಮ್ಮದೇ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದು ಕೆಎಂಎಫ್ ನಿರ್ದೇಶಕ ಕೆ.ಪಿ.ಸುಚರಿತ ಶೆಟ್ಟಿ ಹೇಳಿದರು.
ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್, ಹಳೇ ವಿದ್ಯಾರ್ಥಿ ಸಂಘ ಹಾಗೂ ದಾನಿಗಳು ಕಡಂದಲೆ ವಿದ್ಯಾಗಿರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೊಡುಗೆಯಾಗಿ ನೀಡಿದ ನೋಟ್‌ಬುಕ್‌ಗಳನ್ನು ಸೋಮವಾರ ವಿತರಿಸಿ ಮಾತನಾಡಿದರು.
ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್‌ನ ನಿಯೋಜಿತ ಅಧ್ಯಕ್ಷ ಹರೀಶ್ ಎಂ.ಕೆ., ನಿಯೋಜಿತ ಕಾರ್ಯದರ್ಶಿ ಭರತ್ ಶೆಟ್ಟಿ, ಸದಸ್ಯ ಶಂಕರ್ ಎ.ಕೋಟ್ಯಾನ್, ನಿವೃತ್ತ ಶಿಕ್ಷಕಿ ನಿರ್ಮಲಾ ಆರ್.ಪಂಡಿತ್, ಉದ್ಯಮಿ ರಾಜೇಶ್ ಕೋಟ್ಯಾನ್, ಎಸ್‌ಡಿಎಂಸಿ ಅಧ್ಯಕ್ಷ ಸೀತಾರಾಮ್ ಸಾಲ್ಯಾನ್, ಉಪಾಧ್ಯಕ್ಷರಾದ ಪ್ರಣೀತಾ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ಪೂಜಾರಿ ಪೂಪಾಡಿಕಲ್ಲು, ಮುಖ್ಯ ಶಿಕ್ಷಕಿ ಪ್ರತಿಭಾ ಎಂ.ಪಿ., ಶಿಕ್ಷಕರಾದ ಸತೀಶ್ ಶೆಟ್ಟಿ, ಪೌಲಿನ್ ಪಿಂಟೋ, ಸುಮನಾ ಎಚ್.ಸಿ. ಉಪಸ್ಥಿತರಿದ್ದರು.