More

    ರಾಗಿಮಾಲ್ಟ್ ವಿತರಣೆ

    ಕಪ್ಪಸೋಗೆ: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸುವ ಸಲುವಾಗಿ ರಾಗಿಮಾಲ್ಟ್ ವಿತರಿಸಲಾಗುತ್ತಿದೆ ಎಂದು ಕಪ್ಪಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶೈಲಜಾ ಹೇಳಿದರು.

    ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 1ರಿಂದ 10ನೇ ತರಗತಿ ಮಕ್ಕಳ ಪೌಷ್ಟಿಕತೆಯನ್ನು ವೃದ್ಧಿಸುವ ನಿಟ್ಟಿನಲ್ಲಿ ವಾರಕ್ಕೆ ಮೂರು ದಿನ ಕ್ಷೀರ ಭಾಗ್ಯ ಯೋಜನೆ ಯೊಂದಿಗೆ ರಾಗಿ ಮಾಲ್ಟ್ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

    ಎಸ್‌ಡಿಎಂಸಿ ಅಧ್ಯಕ್ಷ ಸೋಮನಾಯಕ, ಕೆ.ಪಿ.ಮಲ್ಲಿಕಾರ್ಜುನಪ್ಪ, ಯಜಮಾನರಾದ ಸಣ್ಣನಾಯ್ಕ, ಕೆ.ಎಸ್.ಶಿವಪಾದಪ್ಪ, ಪತಕರ್ತ ಕಪ್ಪಸೋಗೆ ಗೋವಿಂದ ನಾಯ್ಕ, ರಮೇಶ್‌ಮೂರ್ತಿ, ಶಿಕ್ಷಕರು ಗ್ರಾಮಸ್ಥರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts