ಮೈಸೂರು: ಸಂಕ್ರಾಂತಿ ಹಬ್ಬದ ಅಂಗವಾಗಿ ಪೌರಕಾರ್ಮಿಕರಿಗೆ ಸೀರೆ, ಬಳೆ, ಎಳ್ಳು, ಬೆಲ್ಲ ವಿತರಿಸುವ ಮೂಲಕ ಬಾಗಿನ ನೀಡಿ ಸಂಕ್ರಾಂತಿಯ ಶುಭಾಶಯ ಕೋರಲಾಯಿತು.
ಶ್ರೀ ದುರ್ಗಾ ಫೌಂಡೇಶನ್‌ನಿಂದ ಕಾಳಿದಾಸ ರಸ್ತೆ ವಿಜಯನಗರದಲ್ಲಿರುವ ಕಾಂಗರೂ ಕೇರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಫರ್ಟಿಲಿಟಿ ಸೆಂಟರ್‌ನಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಗರಪಾಲಿಕೆಯ ಪೌರಕಾರ್ಮಿಕರು ವಿವಿಧ ಸಂಘಟನೆಯವರು ಭಾಗವಹಿಸಿದ್ದರು.
ಆಸ್ಪತ್ರೆಯ ವೈದ್ಯ ಡಾ.ಮಂಜುನಾಥ್ ಮಾತನಾಡಿ, ಹಬ್ಬಗಳು ಸಂಸ್ಕೃತಿ ಬಿಂಬಿಸುವ ಪ್ರತೀಕವಾಗಿವೆ. ಭಾರತೀಯ ಸಂಪ್ರದಾಯದಲ್ಲಿ ಸಂಕ್ರಾಂತಿ ಹಬ್ಬ ವಿಶಿಷ್ಟವಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ ರೈತರು ಹೊಸ ವರ್ಷದಂತೆ ಆಚರಿಸುತ್ತಾರೆ. ಗ್ರಾಮೀಣ ಭಾಗಗಳಲ್ಲಿ ಕೃಷಿ ಸಲಕರಣೆಗಳಿಗೆ ಪೂಜೆ ಸಲ್ಲಿಸುವ ಮೂಲಕ ಗೌರವಿಸಲಾಗುತ್ತಿದೆ. ಇನ್ನು ಜಾನುವಾರುಗಳಿಗೆ ಸಿಂಗಾರಗೊಳಿಸಿ, ಗ್ರಾಮಗಳಲ್ಲಿ ಮೆರವಣಿಗೆ ಮಾಡುವುದು ವಿಶೇಷ ಎಂದು ಬಣ್ಣಿಸಿದರು.
ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷೆ ಹೇಮಾನಂದೀಶ್ ಮಾತನಾಡಿ, ಪೌರ ಕಾರ್ಮಿಕ ಮಹಿಳೆಯರು ತಮ್ಮ ಕುಟುಂಬದ ನಿರ್ವಹಣೆಯ ಜವಾಬ್ದಾರಿಯೊಂದಿಗೆ ಪಟ್ಟಣ ಜನರ ಆರೋಗ್ಯ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಇಂತಹ ಸಹೋದರಿಯರಿಗೆ ಬಾಗಿನ ನೀಡಿದ್ದು, ಇದನ್ನು ಪ್ರತಿವರ್ಷ ಮುಂದುವರಿಸಲಿ ಎಂದು ಆಶಿಸಿದರು.
ಇಂತಹ ಮೌಲ್ಯಯುತ ಸೇವೆ ತಮ್ಮಲ್ಲಿ ಖುಷಿ ನೀಡಿದ್ದು, ನಮಗಾಗಿ ದುಡಿಯುವ ಪೌರಕಾರ್ಮಿಕ ಮಹಿಳೆಯರ ಮನ-ಮೊಗದಲ್ಲಿ ಸಂತಸ ಮೂಡಿರುವುದು ಸಾರ್ಥಕ್ಯ ತರಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್, ಕಾಂಗರೂ ಕೇರ್ ಸಿಇಒ ಹಾಗೂ ಸಂಸ್ಥಾಪಕ ಡಾ.ಶೇಖರ್ ಸುಬ್ಬಯ್ಯ, ವೈದ್ಯರಾದ ಡಾ.ವೀಣಾ, ಡಾ.ಶ್ರುತಿ, ಡಾ.ಶುಭಾ, ಡಾ.ಸ್ವಾತಿ, ಡಾ.ರಶ್ಮಿ ಕಿಶೋರ್, ಅಂಬಾಭವಾನಿ ಮಹಿಳಾ ಸಂಘದ ಅಧ್ಯಕ್ಷರಾದ ಸವಿತಾ ಘಾಟ್ಕೆ, ಕೆ.ಆರ್.ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್, ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ ನಿರ್ದೇಶಕ ಎ.ರವಿ, ವಿವಿಧ ಸಂಘಟನೆಯ ಅಕ್ಷತಾ, ನಿವೇದಿತಾ, ಗಣೇಶ್, ಮಾಲಿನಿ ಪಾಲಾಕ್ಷ, ಸಂಧ್ಯಾ ರಾಣಿ, ಐಶ್ವರ್ಯ, ಮಹಾನ್ ಶ್ರೇಯಸ್, ರಾಮಪ್ಪ ಇತರರು ಇದ್ದರು.
ಪೌರಕಾರ್ಮಿಕರಿಗೆ ಸೀರೆ, ಬಳೆ, ಎಳ್ಳು, ಬೆಲ್ಲ ಬಾಗಿನ ವಿತರಣೆ

You Might Also Like
ರಾತ್ರಿ ವೇಳೆ ಮಾವಿನ ಹಣ್ಣು ತಿನ್ನಬಾರದು! ಯಾಕೆ ಗೊತ್ತಾ? mango
mango: ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುವ ಹಣ್ಣು ಮಾವಿಹಣ್ಣು. ಇದು ವಿಟಮಿನ್ ಎ, ಸಿ, ಫೈಬರ್, ಉತ್ಕರ್ಷಣ…
ಅಕ್ಷಯ ತೃತೀಯ ಹಬ್ಬಕ್ಕೂ ಮುನ್ನ ನಿಮ್ಮ ಮನೆಯಿಂದ ಈ ವಸ್ತುಗಳನ್ನು ತೆಗೆದುಹಾಕಿ.. Akshaya Tritiya
Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಲಕ್ಷ್ಮಿ ದೇವಿಯ ಹಬ್ಬವೆಂದು ಪರಿಗಣಿಸಲಾಗುತ್ತದೆ. ಚಿನ್ನದ ಅಂಗಡಿಗಳು ವ್ಯಾಪಾರದಿಂದ…
ಕಬ್ಬಿನ ರಸವನ್ನು ಎಷ್ಟು ದಿನ ಸಂಗ್ರಹಿಸಬಹುದು..ಈ ಜ್ಯೂಸ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳಿವು..Sugarcane Juice
Sugarcane Juice: ಕಬ್ಬಿನ ಜ್ಯೂಸ್ ಬೇಸಿಗೆಯಲ್ಲಿ ಎಲ್ಲರೂ ಹೆಚ್ಚು ಇಷ್ಟಪಡುವ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ.…