

ಬಂಟ್ವಾಳ: ದೇಶದಲ್ಲಿ ಬಡತನದ ನಡುವೆ ಕಲಿಯುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗುವಂತೆ ಸರ್ಕಾರೇತರ ಸಂಘ-ಸಂಸ್ಥೆಗಳು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿವೆ. ವಿದ್ಯಾರ್ಥಿಗಳು ಧನಾತ್ಮಕವಾಗಿ ಓದಿನ ಜತೆಗೆ ಸಾಧನೆ ಕಡೆಗೆ ಗಮನ ಹರಿಸಬೇಕು ಎಂದು ಬೆಂಗಳೂರು ಯುನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಅಧ್ಯಕ್ಷ ಆರ್.ಉಪೇಂದ್ರ ಶೆಟ್ಟಿ ಹೇಳಿದರು.
ಬಂಟರ ಸಂಘ, ಮುಂಬೈ ಆಲ್ ಕಾರ್ಗೊ ಲಾಜಿಸ್ಟಿಕ್ ಅಧ್ಯಕ್ಷ ಶಶಿಕಿರಣ್ ಶೆಟ್ಟಿ ಅವರ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮದಡಿ ಬಂಟವಾಳ ಬಂಟರ ಭವನದಲ್ಲಿ ಭಾನುವಾರ ನಡೆದ 1200 ವಿದ್ಯಾರ್ಥಿಗಳಿಗೆ 45 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆಲ್ ಕಾರ್ಗೊ ಲಾಜಿಸ್ಟಿ ಕ್ ಸಂಸ್ಥೆ ಹಿರಿಯ ಪ್ರಧಾನ ವ್ಯವಸ್ಥಾಪಕ ಡಾ.ನೀಲ್ ರತನ್ ಶಿಂಧೆ ಮಾತನಾಡಿ, ವಿಕಸಿತ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಕೊಡುಗೆ ಅಗತ್ಯವಿದೆ ಎಂದರು.
ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಜತೆ ಕಾರ್ಯದರ್ಶಿ ರಂಜನ್ ಕುಮಾರ್ ಶೆಟ್ಟಿ, ಜತೆ ಕೋಶಾಧಿಕಾರಿ ಪ್ರತಿಭಾ ಎ.ರೈ., ಮಹಿಳಾ ವಿಭಾಗ ಅಧ್ಯಕ್ಷೆ ರಮಾ ಎಸ್.ಭಂಡಾರಿ, ವಿದ್ಯಾರ್ಥಿವೇತನ ಸಂಚಾಲಕ ಎಚ್.ಸಂಕಪ್ಪ ಶೆಟ್ಟಿ ಶುಭ ಹಾರೈಸಿದರು.
ಎರಡು ಅಶಕ್ತ ಕುಟುಂಬಗಳಿಗೆ ಏರ್ಯ ಲಕ್ಷ್ಮೀನಾರಾಯಣ ಆಳ್ವ ದತ್ತಿನಿಧಿ ಸಹಾಯಧನ ವಿತರಿಸಲಾಯಿತು. ಎಸ್ಸೆಸ್ಸೆಲ್ಸಿ, ಪಿಯುಸಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ, ವೈದ್ಯಕೀಯ ಶಿಕ್ಷಣ ಕ್ಷೇತ್ರದ ಸಾಧಕರಾದ ಡಾ.ಸನ್ಮಾನ್ ಮಲ್ಲಿ, ಡಾ.ಅಧಿಶಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಪ್ರಮುಖರಾದ ಚಂದ್ರಹಾಸ ರೈ ಬಾಲಾಜಿಬೈಲು, ಪ್ರಕಾಶ್ಚಂದ್ರ ಆಳ್ವ ಪಿ., ವಿದ್ಯಾ ಎ.ರೈ., ದಿವ್ಯಾ ಶೆಟ್ಟಿ, ಮಣಿಮಾಲ ಶೆಟ್ಟಿ ಮತ್ತಿತರರು ಇದ್ದರು. ಸಂಘದ ಮಾಜಿ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರಿಗುತ್ತು ಅತಿಥಿಗಳನ್ನು ಪರಿಚಯಿಸಿದರು. ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ ಸ್ವಾಗತಿಸಿದರು. ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಕೆ. ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.