ತೊಟ್ಟೆತ್ತೋಡಿಯಲ್ಲಿ ಕಲಿಕೋಪಕರಣ ವಿತರಣೆ

New Project (10)
Published on

ಮಂಜೇಶ್ವರ: ತೊಟ್ಟೆತ್ತೋಡಿ ವಾಣೀ ವಿಲಾಸ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರವೇಶೋತ್ಸವ ಸೋಮವಾರ ಜರುಗಿತು.

ಶಾಲಾ ಪ್ರಬಂಧಕ ಡಾ.ಜಯಪ್ರಕಾಶ್ ನಾರಾಯಣ ಟಿ.ಕೆ. ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಸದಸ್ಯ ಕುಸುಮಾ ಮೋಹನ್ ಉದ್ಘಾಟಿಸಿದರು.

ಶಾಲಾ ಮಕ್ಕಳಿಗೆ ಎಸ್.ಎ್.ಐ ವಿದ್ಯಾರ್ಥಿಗಳು ಕಲಿಕೋಪಕರಣ ನೀಡಿದರು. ಶಾಲಾ ಹಿತೈಷಿ ದೇವದಾಸ ಶೇನವ 1ನೇ ತರಗತಿ ವಿದ್ಯಾರ್ಥಿಗಳಿಗೆ ಬ್ಯಾಗ್ ನೀಡಿದರು. ಬಾಲಕೃಷ್ಣ ಶೆಟ್ಟಿ ಮಂಗಳೂರು ಮಕ್ಕಳಿಗೆ ನೋಟ್ ಪುಸ್ತಕ ನೀಡಿದರು. ಮುಖ್ಯಶಿಕ್ಷಕಿ ರಾಜೇಶ್ವರಿ ಎಸ್.ರಾವ್ ಸ್ವಾಗತಿಸಿದರು. ದೀಕ್ಷಾ ಕೆ. ವಂದಿಸಿದರು. ಜಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net