More

    96 ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ

    ಹುಣಸೂರು: ದೇವರಾಜ ಅರಸು ನಿಗಮ ಮತ್ತು ಸಣ್ಣ ಕೈಗಾರಿಕೆ ಇಲಾಖೆ ಸಹಯೋಗದಲ್ಲಿ 96 ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ಶಾಸಕ ಜಿ.ಡಿ.ಹರೀಶ್‌ಗೌಡ ವಿತರಿಸಿದರು.

    ನಗರದ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಶದ ಅವರು, ಸರ್ಕಾರಗಳು ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡುತ್ತಿದ್ದು, ಮಹಿಳೆಯರು ಯೋಜನೆಯ ಸದುಪಯೋಗ ಪಡೆಯಬೇಕು.

    ಲಿಗೆ ಕಸುಬು ಎಂದಿಗೂ ಅವಶ್ಯಕವಾದದ್ದು. ಸ್ವ-ಉದ್ಯೋಗದೊಂದಿಗೆ ಇತರರಿಗೂ ಉದ್ಯೋಗ ನೀಡಬಹುದಾದ ಉದ್ಯಮವಾಗಿ ಬೆಳೆಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ. ಕುಶಲಕರ್ಮಿಗಳು ಮತ್ತು ವಿವಿಧ ರೀತಿಯ ಸಾಂಪ್ರದಾಯಿಕ ಪದ್ಧತಿಯ ಕಸುಬುಗಳನ್ನು ಕಲಿತವರು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಸಾಲಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಮುನ್ನಡೆಯಲು ಅವಕಾಶ ನೀಡಲಾಗಿದೆ. 18ಕ್ಕೂ ಹೆಚ್ಚು ಬಗೆಯ ಕುಶಲಕರ್ಮಿಗಳಿಗೆ ವಿಶ್ವಕರ್ಮ ಯೋಜನೆಯಡಿ ಸಾಲಸೌಲಭ್ಯ ಸಿಗಲಿದೆ ಎಂದರು.

    ತಾ.ಪಂ.ಕಾರ್ಯ ನಿರ್ವಹಣಾಧಿಕಾರಿ ಶಿವಕುಮಾರ್, ಸಣ್ಣ ಕೈಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಅಶ್ವಿನಿ, ದೇವರಾಜ ಅರಸು ಅಭಿವೃದ್ಧಿ ನಿಗಮದ ಸಹಾಯಕ ಅಭಿವೃದ್ಧಿ ಅಧಿಕಾರಿ ಕಿಶೋರ್‌ಕುಮಾರ್, ಮುಖಂಡ ಸತೀಶ್ ಪಾಪಣ್ಣ, ಎಂ.ಬಿ.ಸುರೇಂದ್ರ, ಟಿಎಪಿಸಿಎಂಎಸ್ ಅಧ್ಯಕ್ಷ ಬಸವಲಿಂಗಯ್ಯ, ಫಲಾನುಭವಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts