

ಸುಬ್ರಹ್ಮಣ್ಯ: ರೋಟರಿ ಕ್ಲಬ್ ಸುಬ್ರಹ್ಮಣ್ಯ ವತಿಯಿಂದ ಬಳ್ಪ ಗ್ರಾಮದ ಸಂಪ್ಯಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ಸುಬ್ರಹ್ಮಣ್ಯ ರೋಟರಿ ಕ್ಲಬ್ ಸದಸ್ಯ ಸಮೀರ್ ಬಳ್ಪ ಸಮವಸ್ತ್ರ ಕೊಡುಗೆಯಾಗಿ ನೀಡಿದ್ದರು. ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೂ ಉಚಿತವಾಗಿ ಸಮವಸ್ತ್ರ ವಿತರಿಸಲಾಯಿತು.
ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಪೂರ್ವಾಧ್ಯಕ್ಷ ಗೋಪಾಲ ಎಣ್ಣೆಮಜಲ್, ನಿರ್ದೇಶಕ ಸುದರ್ಶನ ಶೆಟ್ಟಿ, ಸಮವಸ್ತ್ರ ಪ್ರಾಯೋಜಕರಾದ ಸಮೀರ್ ಬಳ್ಪ, ಕಾರ್ಯದರ್ಶಿ ಚಿದಾನಂದ ಕುಳ, ಶಾಲಾ ಮುಖ್ಯಶಿಕ್ಷಕಿ ವೇದಾವತಿ ಸೇರಿದಂತೆ ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.