More

    ವಿದ್ಯಾರ್ಥಿನಿಯರಿಗೆ ವಿದ್ಯಾ ಜ್ಯೋತಿ ವಿತರಣೆ

    ಆಯನೂರು: ಹೆಣ್ಣು ಮಕ್ಕಳಿಗೆ ಶಿಕ್ಷಣಕ್ಕೆ ಉತ್ತೇಜಿಸಲು ಕೆನರಾ ಬ್ಯಾಂಕ್‌ನಿಂದ ಕೆನರಾ ವಿದ್ಯಾ ಜ್ಯೋತಿ ಯೋಜನೆಯಲ್ಲಿ ಎಸ್ಸಿ, ಎಸ್ಟಿ ಬಾಲಕಿಯರಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಶಿವಮೊಗ್ಗ ಪ್ರಾದೇಶಿಕ ಕಚೇರಿಯ ಡಿಜಿಎಂ ದೇವರಾಜ್ ತಿಳಿಸಿದರು.
    ನಗರದ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದರು. ಹೆಣ್ಣು ಮಕ್ಕಳನ್ನು ಶಿಕ್ಷಣದತ್ತ ಆಕರ್ಷಿಸಲು ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ಹಣವು ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಲಾಗುತ್ತದೆ. 5 ರಿಂದ 7ನೇ ತರಗತಿಯ ಮಕ್ಕಳಿಗೆ 2,500 ರೂ., 8ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ 5,000 ರೂ. ಈ ಯೋಜನೆಯಲ್ಲಿ ನೀಡಲಾಗುವುದು. ಮಕ್ಕಳು ಸಣ್ಣ ವಯಸ್ಸಿನಲ್ಲಿಯೇ ಉಳಿತಾಯದ ಮನೋಭಾವ ಬೆಳೆಸಿಕೊಳ್ಳಬೇಕು. ದಿನ ನಿತ್ಯ 10 ರೂ ಉಳಿಸಿದರೂ ವರ್ಷಕ್ಕೆ 3650 ರೂ. ಸಂಗ್ರಹಿಸಬಹುದು. ಇದು ನಿಮ್ಮ ಖಾತೆಗೆ ಹಾಕಿದರೆ ಮುಂದಿನ ಭವಿಷ್ಯದಲ್ಲಿ ಅನುಕೂಲವಾಗುತ್ತದೆ ಎಂದರು.
    ಶಾಲಾ ಮುಖ್ಯ ಶಿಕ್ಷಕಿ ಹೇಮಾವತಿ ಮಾತನಾಡಿ, ಕೆನರಾ ಬ್ಯಾಂಕಿನಿಂದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಪ್ರಶಂಸನೀಯ ಎಂದರು. ಆಯನೂರು ಕೋಹಳ್ಳಿ ಮಂಡಘಟ್ಟ, ಚಿಕ್ಕಮತ್ಲಿ, ದ್ಯಾವಿನಕೆರೆ, ಚಾಮುಂಡಿಪುರ, ಕೋಟೆ ಶಾಲೆಗಳ ಸುಮಾರ 20 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಜತೆಗೆ ಕೆನರಾ ಬ್ಯಾಂಕ್ ಅಧಿಕಾರಿಗಳ ಸಂಘದಿಂದ ಆಯನೂರು ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಕ್ರೀಡಾ ಕಿಟ್ ವಿತರಿಸಲಾಯಿತು.
    ಕೆನರಾ ಬ್ಯಾಂಕ್ ಪ್ರಧಾನ ಕಾರ್ಯದರ್ಶಿ ನೆಲ್ಸನ್, ಕೆನರಾ ಬ್ಯಾಂಕಿನ ಎಲ್.ಡಿ.ಎಂ.ಅಮರನಾಥ, ಪ್ರಾದೇಶಿಕ ಕಚೇರಿಯ ಕಾರ್ಯದರ್ಶಿ ಹೊನ್ನಪ್ಪ, ಚೇರ್ಮನ್ ರಾಘವೇಂದ್ರ, ಬ್ಯಾಂಕ್ ಅಧಿಕಾರಿ ದೀಪ್ತಿ, ಆಯನೂರು ಕೆನರಾ ಬ್ಯಾಂಕ್ ಶಾಖಾ ವ್ಯವಸ್ಥಾಪಕ ನವೀನ್ ಕುಮಾರ್, ಸಿಬ್ಬಂದಿ, ಶಾಲಾ ಶಿಕ್ಷಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts