More

    ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನ 21ರಂದು

    ಮುಂಡರಗಿ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಪಟ್ಟಣದ ಕೆ.ಆರ್. ಬೆಲ್ಲದ ಕಾಲೇಜ್ ಸಭಾಭವನದಲ್ಲಿ ಮಾ.21ರಂದು ಬೆಳಗ್ಗೆ 10 ಗಂಟೆಗೆ ಗದಗ ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ.

    ಸಮ್ಮೇಳನದಲ್ಲಿ ನಾಡೋಜ ಡಾ. ಅನ್ನದಾನೀಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಪ್ರಾಚಾರ್ಯ ಸಿ.ಎಸ್. ಅರಸನಾಳ ಸರ್ವಾಧ್ಯಕ್ಷತೆ ವಹಿಸುವರು. ಮಾಜಿ ಸಚಿವ ಎಸ್.ಎಸ್. ಪಾಟೀಲ ಉದ್ಘಾಟಿಸುವರು. ಶಾಸಕ ರಾಮಣ್ಣ ಲಮಾಣಿ, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಪ್ರಸಾರಾಂಗ ನಿರ್ದೇಶಕ ಚನ್ನಬಸಪ್ಪ ಧಾರವಾಡಶೆಟ್ರು, ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಪ್ರಹ್ಲಾದ ಗೆಜ್ಜಿ, ಪುರಸಭೆ ಅಧ್ಯಕ್ಷೆ ಕವಿತಾ ಉಳ್ಳಾಗಡ್ಡಿ, ಉಪಾಧ್ಯಕ್ಷ ಶಿವಪ್ಪ ಚಿಕ್ಕಣ್ಣವರ, ಜಿಪಂ ಸದಸ್ಯೆ ಶೋಭಾ ಮೇಟಿ, ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಮುಖಂಡರಾದ ಕೆ.ವಿ. ಹಂಚಿನಾಳ, ಹೇಮಗಿರೀಶ ಹಾವಿನಾಳ, ರಾಮಚಂದ್ರ ಕಲಾಲ, ನಾಗೇಶ ಹುಬ್ಬಳ್ಳಿ ಇತರರು ಪಾಲ್ಗೊಳ್ಳುವರು. ಮಧ್ಯಾಹ್ನ 1.30 ಗಂಟೆಗೆ ಚುಟುಕು ವಾಚನ ಗೋಷ್ಠಿ ನಡೆಯಲಿದ್ದು, ಪತ್ರಕರ್ತ ಕಾಶಿನಾಥ ಬಿಳಿಮಗ್ಗದ ಅಧ್ಯಕ್ಷತೆ ವಹಿಸುವರು. ಮಕ್ಕಳ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷ ಡಾ. ರಾಜೇಂದ್ರ ಗಡಾದ ಆಶಯ ನುಡಿಗಳನ್ನಾಡಲಿದ್ದಾರೆ. ಕವಿಗಳು ಚುಟುಕು ಕವನ ವಾಚಿಸುವರು. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ವೈ.ಎನ್. ಗೌಡರ ಅಧ್ಯಕ್ಷತೆ ವಹಿಸುವರು. ತಾಲೂಕು ಮಕ್ಕಳ ಸಾಹಿತ್ಯ ವೇದಿಕೆ ಅಧ್ಯಕ್ಷೆ ಭಾಗ್ಯಲಕ್ಷ್ಮಿ ಇನಾಮತಿ ನಿರ್ಣಯಗಳನ್ನು ಮಂಡಿಸುವರು ಎಂದು ಪ್ರಕಟಣೆ ತಿಳಿಸಿದೆ.

    ಸರ್ವಾಧ್ಯಕ್ಷರಿಗೆ ಆಹ್ವಾನ

    ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಮಠದಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಪ್ರಾಚಾರ್ಯ ಸಿ.ಎಸ್. ಅರಸನಾಳ ಅವರನ್ನು ತಾಲೂಕು ಘಟಕದ ಪದಾಧಿಕಾರಿಗಳು ಗುರುವಾರ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ತಾಲೂಕು ಘಟಕದ ಉಪಾಧ್ಯಕ್ಷ ಸಿ.ಕೆ. ಗಣಪ್ಪನವರ, ಪ್ರಧಾನ ಕಾರ್ಯದರ್ಶಿ ಕಾಶೀನಾಥ ಬಿಳಿಮಗ್ಗದ, ಡಾ. ನಿಂಗು ಸೊಲಗಿ, ಶಂಕರ ಕುಕನೂರ, ಶಶಿಕಲಾ ಹಂಚಿನಾಳ, ವೀರೇಶ ಬಾಗೋಡಿ, ಮಂಜುಳಾ ಇಟಗಿ ಇತರರಿದ್ದರು.



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts