More

    ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ, ಡಿಸಿ ಸುದ್ದಿಗೋಷ್ಠಿ

    ಬೆಳಗಾವಿ: ಚಿಕ್ಕೋಡಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ ಮೇ 7ರಂದು ನಡೆಯಲಿದೆ. ಯಾವುದೇ ಲೋಪ ದೋಷಗಳಾಗದಂತೆ ಚುನಾವಣೆಗೆ ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.
     ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ 19,23,788 ಮತದಾರರಿದ್ದಾರೆ. ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ 17,61,694 ಮತದಾರರಿದ್ದಾರೆ. ಭಾರತ ಚುನಾವಣಾ ಆಯೋಗದ ಅನುಮೋದಿಸಿರುವಂತೆ ಮತದಾರರು ಹಕ್ಕು ಮೊದಲು ಮತದಾನ ಕೇಂದ್ರಗಳಲ್ಲಿ ಅವರ ಗುರುತಿಗಾಗಿ ಮತದಾರರ ಗುರುತಿಸಿ ಚೀಟಿ ತೋರಿಸಿ ಮತದಾನ ಮಾಡಬಹುದು. ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ ಎಂದರು.
     ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಎಲ್ಲ ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಕಾಲೇಜುಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳಿಗೆ ಸಾರ್ವತ್ರಿಕ ರಜೆ ಘೋಷಿಸಿದೆ. ಆರ್‌ಪಿ ಕಾಯ್ದೆ 1951 ರ ಸೆಕ್ಷನ್ 135ಬಿ ಪ್ರಕಾರ ಪಾವತಿಸಿದ ರಜೆ ಮಂಜೂರು ಮಾಡಲು ಆದೇಶಿಸಿದೆ. ಕಾನೂನುಬಾಹಿರ ಸಭೆ ನಿಷೇಧಿಸಲಾಗಿದೆ ಮತ್ತು ಮತದಾನದ ಮುಕ್ತಾಯಕ್ಕೆ ನಿಗದಿಪಡಿಸಿದ ಗಂಟೆಯೊಂದಿಗೆ ಕೊನೆಗೊಳ್ಳುವ ಮುಂಚಿನ 48 ಗಂಟೆಗಳ ಅವಧಿಯಲ್ಲಿ ಸಾರ್ವಜನಿಕ ಸಭೆ ನಡೆಸುವಂತಿಲ್ಲ. ಮದ್ಯಪಾನ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಪ್ರಚಾರದ ಅವಧಿ ಮುಗಿದ ನಂತರ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವುದೇ ಪ್ರಚಾರ ನಡೆಸುವಂತಿಲ್ಲ, ಕ್ಷೇತ್ರದ ಹೊರಗಿನಿಂದ ಕರೆತಂದಿರುವ ರಾಜಕೀಯ ಕಾರ್ಯಕರ್ತರು/ಮುಖಂಡರು ಮುಂತಾದವರು ಸೇರಿ ಆ ಕ್ಷೇತ್ರದ ಮತದಾರರಲ್ಲದ ರಾಜಕೀಯ ವ್ಯಕ್ತಿಗಳು ಕ್ಷೇತ್ರವನ್ನು ತೊರೆಯಬೇಕು ಎಂದರು.
     ಮುದ್ರಣ ಅಥವಾ ವಿದ್ಯುನ್ಮಾನ ಮಾಧ್ಯಮ ಸೇರಿ ಯಾವುದೇ ಮಾಧ್ಯಮಗಳಲ್ಲಿ ಚುನಾವಣಾ ಸಮೀಕ್ಷೆಗಳು ಸೇರಿ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ರೀತಿ ಸಮೀಕ್ಷೆ ಮಾಡಬಾರದು ಎಂದು ಮುದ್ರಣ, ವಿದ್ಯುನ್ಮಾನ ಮಾಧ್ಯಮಗಳಿಗೆ ತಿಳಿಸಲಾಗಿದೆ. ಮತದಾನ ಕೇಂದ್ರದಿಂದ 200 ಮೀ. ವ್ಯಾಪ್ತಿಯೊಳಗೆ ಯಾವುದೇ ಚುನಾವಣಾ ಬೂತ್‌ಗಳನ್ನು ಸ್ಥಾಪಿಸಿದಂತೆ ಸೂಚನೆ ನೀಡಲಾಗಿದೆ. ಒಂದೇ ಕಟ್ಟಡ/ ಸ್ಥಳ ಅಥವಾ ಆವರಣದಲ್ಲಿ ಒಂದಕ್ಕಿಂತ ಹೆಚ್ಚು ಮತಗಟ್ಟೆ ಸ್ಥಾಪಿಸಿದ್ದರೂ ಅಂತಹ ಆವರಣದಿಂದ 200 ಮೀ ದೂರದಲ್ಲಿ ಅಭ್ಯರ್ಥಿಗಳು ತಮ್ಮ ಪಕ್ಷಗಳ ತಾತ್ಕಾಲಿಕ ಕಚೇರಿ ತೆರೆಯಲು ಅವಕಾಶವಿದೆ. ಮತಗಟ್ಟೆ ಸುತ್ತಲಿನ 200 ಮೀ. ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಎಸ್ಪಿ ಡಾ.ಭೀಮಾಶಂಕರ ಗುಳೇದ, ಡಿಸಿಪಿ ರೋಹನ ಜಗದೀಶ, ಪ್ರೊಬೇಷನರಿ ಐಎಎಸ್ ಅಧಿಕಾರಿ ಶುಭಂ ಶುಕ್ಲಾ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts