More

    ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ; ಅಧಿಕಾರಿಗಳಿಗೆ ಚುನಾವಣಾ ತರಬೇತಿ

     ತುಮಕೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದ 2683 ಮತಗಟ್ಟೆಗಳಲ್ಲಿ ಚುನಾವಣೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದೆ.

    ಚುನಾವಣೆ ಸಂದರ್ಭದಲ್ಲಿ ಕಾರ್ಯನಿರ್ವಹಿಸಬೇಕಾದ ಫ್ಲೈಯಿಂಗ್ ಸ್ಕ್ವಾಡ್, ವಿಡಿಯೋ ವೀಕ್ಷಣಾ ತಂಡ, ಸ್ಟ್ಯಾಟಿಕ್ ತಂಡ, ಚುನಾವಣಾ ವೆಚ್ಚದ ತಂಡ, ಸೆಕ್ಟರ್ ಅಧಿಕಾರಿಗಳು ಸೇರಿ ವಿವಿಧ ಹಂತದ ಅಧಿಕಾರಿಗಳಿಗಾಗಿ ಸೋಮವಾರ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಚುನಾವಣಾ ತರಬೇತಿ ಕೂಡ ನಡೆಯಿತು.

    ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾತನಾಡಿ, ಚುನಾವಣಾ ಕರ್ತವ್ಯಕ್ಕೆ ನೇಮಕವಾಗುವ ಅಧಿಕಾರಿ ಹಾಗೂ ಸಿಬ್ಬಂದಿ ಯಾವುದೇ ನೆಪ ಹೇಳಿ ಗೈರಾಗದೆ, ಕಡ್ಡಾಯವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

    ಎಲ್ಲ ಮತಗಟ್ಟೆಗಳಲ್ಲಿಯೂ ಶಾಂತಿಯುತ ಮತದಾನ ನಡೆಯುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಅಧಿಕಾರಿಗಳು ಪೊಲೀಸ್ ಇಲಾಖೆ ಸಹಕಾರದಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

    ಚುನಾವಣಾ ಅಕ್ರಮಗಳು ಕಂಡು ಬಂದಾಗ ವಾಸ್ತವಾಂಶ ಅರಿತು ಯಾರಿಗೂ ಹೆದರದೆ ಪ್ರಕರಣ ದಾಖಲಿಸಬೇಕು. ಯಾರ ಪರ, ವಿರೋಧವಾಗಿಯೂ ಕೆಲಸ ಮಾಡದೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ಎಚ್ಚರಿಸಿದರು.

    ಜಿಲ್ಲೆಯಲ್ಲಿ ಶಾಂತಿಯುತ ಮತದಾನಕ್ಕೆ ಪೊಲೀಸ್ ಇಲಾಖೆಯಿಂದ ಅಗತ್ಯ ಸಹಕಾರ ನೀಡಲಾಗುವುದು, ಜಿಲ್ಲೆಯು ಉತ್ತಮ ಚುನಾವಣಾ ತಂಡ ಹೊಂದಿದ್ದು, ಅಧಿಕಾರಿಗಳು ಸಮನ್ವಯತೆ ಹಾಗೂ ಜಾಗರೂಕತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಬೇಕು, ಜಿಲ್ಲಾ ಚುನಾವಣಾಧಿಕಾರಿ ನಿರ್ದೇಶನಗಳನ್ನು ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ರಾಹುಲ್‌ಕುಮಾರ್ ಶಹಪೂರವಾಡ್ ತಿಳಿಸಿದರು.

    ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಸಂಪನ್ಮೂಲ ವ್ಯಕ್ತಿಗಳಾದ ಜಿ.ವಿ.ಗೋಪಾಲ್, ರಿಜ್ವಾನ್ ಪಾಷ, ವೇದಮೂರ್ತಿ, ಎಚ್.ಬಿ.ಗಂಗಾಧರ್ ಅಧಿಕಾರಿಗಳಿಗೆ ಚುನಾವಣಾ ತರಬೇತಿ ನೀಡಿದರು.

    ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿಗಳಾದ ಕಲ್ಪಶ್ರೀ, ರಿಷಿ ಆನಂದ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮರಿಯಪ್ಪ, ಜಿಪಂ ಉಪಕಾರ್ಯದರ್ಶಿ ಅತೀಕ್ ಇದ್ದರು.

    ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ; ಅಧಿಕಾರಿಗಳಿಗೆ ಚುನಾವಣಾ ತರಬೇತಿ

    ತಂಡಗಳ ಜವಾಬ್ದಾರಿ ತಿಳಿಯಿರಿ: ಮಾಸಾಂತ್ಯದೊಳಗೆ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ, ಇದಕ್ಕಾಗಿ ಚುನಾವಣಾ ಆಯೋಗ 2 ತಿಂಗಳ ಹಿಂದಿನಿಂದಲೇ ಪೂರ್ವ ಸಿದ್ಧತೆ ಕೈಗೊಂಡಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ತಂಡಗಳ ಜವಾಬ್ದಾರಿ ತಿಳಿದುಕೊಳ್ಳಬೇಕು ಎಂದು ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ ತಿಳಿಸಿದರು.

    ಕಾಲಕಾಲಕ್ಕೆ ಬದಲಾಗುವ ನಿಯಮ, ಸುತ್ತೋಲೆಗಳ ಬಗ್ಗೆ ಗಮನ ಇರಬೇಕು, ಅಧಿಕಾರಿಗಳು ಯಾವುದೇ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಬಾರದು, ಚುನಾವಣಾ ಸಂದರ್ಭದಲ್ಲಿ ಇಲಾಖೆ ವಾಹನ ದುರ್ಬಳಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಚುನಾವಣಾ ವಿಷಯಗಳನ್ನು ಗೌಪ್ಯವಾಗಿಡಬೇಕು ಎಂದರು.

    ಸರ್ಕಾರಿ ನೌಕರರು ಯಾವುದೇ ರಾಜಕೀಯ ಅಭ್ಯರ್ಥಿಗಳ ಪರವಾಗಿ ಮಾತನಾಡುವುದಾಗಲಿ ಅಥವಾ ಪಕ್ಷದ ನಾಯಕರ ಜೊತೆಗೆ ಗುರುತಿಸಿಕೊಳ್ಳುವುದಾಗಲಿ ಮಾಡಬಾರದು ಎಂದು ಎಂದರು.

    ಚುನಾವಣಾ ಅಕ್ರಮಗಳ ಬಗ್ಗೆ ಪ್ರಕರಣ ದಾಖಲಿಸುವಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಯಿಂದ ಅಡ್ಡಿಯಾದರೆ ಅಥವಾ ಪಕ್ಷಪಾತಿಯಾಗಿ ನಡೆದುಕೊಂಡರೆ ಕಠಿಣ ಕ್ರಮ ಜರುಗಿಸಲಾಗುವುದು. ಸಿಬ್ಬಂದಿಗಳು ರಾಜಕೀಯ ಮಾಡದೆ ಕರ್ತವ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಬೇಕು.
    | ರಾಹುಲ್‌ಕುಮಾರ್ ಷಹಪುರವಾಡ್ ಜಿಲ್ಲಾ ಪೊಲೀಸ್ ಅಧೀಕ್ಷಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts